ಮನೆ ದೇವರನಾಮ ಕೊಡು ಬೇಗ ದಿವ್ಯಮತಿ ಸರಸ್ವತಿ

ಕೊಡು ಬೇಗ ದಿವ್ಯಮತಿ ಸರಸ್ವತಿ

0

ಕೊಡು ಬೇಗ ದಿವ್ಯಮತಿ ಸರಸ್ವತಿ ||ಪ||

ಮೃಡ ಹರಿಹರ ಮುಖರೊಡೆಯಳೆ ನಿನ್ನಯ
ಅಡಿಗೆರಗುವೆ ಅಮ್ಮ ಬ್ರಹ್ಮನ ರಾಣಿ ||ಅ.ಪ||

ಇಂದಿರಾ ರಮಣನ ಹಿರಿಯ ಸೋಸಯು ನಿನು
ಬಂದೆನ್ನ ವದನದಿ ನಿಂದು ನಾಮವ ನುಡಿಸೆ ||೧||

ಅಖಿಲ ವಿದ್ಯಾಭಿಮಾನಿ ಅಜನ ಪಟ್ಟದರಾಣಿ
ಸುಖವಿತ್ತು ಪಾಲಿಸೆ ಸುಜನ ಶಿರೋಮಣಿ ||೨||

ಪತಿತ ಪಾವನೆ ನೀ ಗತಿಯೆಂದು ನಂಬಿದೆ
ಸತತ ಪುರಂದರ ವಿಠಲನ ತೋರೆ ||೩||