ಚಾಮರಾಜನಗರ(Chamarajanagar): ಜನವಸತಿ ಪ್ರದೇಶದ ಬಳಿಯೇ ಹುಲಿಯೊಂದು ಹಸುವನ್ನು ಬೇಟೆಯಾಡಿರುವ ಘಟನೆ ನೆರೆಯ ತಮಿಳುನಾಡಿನ ಪ್ರಸಿದ್ಧ ಪ್ರವಾಸಿ ತಾಣ ಊಟಿಯಲ್ಲಿರುವ ಹಿಂದೂಸ್ತಾನ್ ಫೋಟೊ ಫಿಲ್ಮ್ಸ್ ನಡೆದಿದೆ.
ಇಲ್ಲಿಂದ ಕೂಗಳತೆ ದೂರದಲ್ಲಿ ಇಂದುನಗರ ಎಂಬ ಜನವಸತಿ ಪ್ರದೇಶವಿದ್ದು, ಹುಲಿಯು ಹಸುವಿನ ಕಳೇಬರದ ಬಳಿ ನಿಂತಿರುವ ದೃಶ್ಯವನ್ನು ಸ್ಥಳೀಯ ನಿವಾಸಿಗಳು ಸೆರೆ ಹಿಡಿದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಗುರುವಾರ ಬೆಳಿಗ್ಗೆ ಈ ದೃಶ್ಯವನ್ನು ಸೆರೆಹಿಡಿಯಲಾಗಿದೆ.
ಹುಲಿಯು ಬುಧವಾರ ಹುಲ್ಲುಗಾವಲಿನಲ್ಲಿ ಮೇಯುತ್ತಿದ್ದ ಹಸುವನ್ನು ಬೇಟೆಯಾಡಿರಬಹುದು ಎಂದು ಶಂಕಿಸಲಾಗಿದೆ.
ಫೋಟೊ ಫಿಲ್ಮ್ಸ್ ಪ್ರದೇಶ ಪ್ರವಾಸಿ ತಾಣವಾಗಿದ್ದು, ಸಾವಿರಾರು ಪ್ರವಾಸಿಗರು ಪ್ರತಿ ದಿನ ಇಲ್ಲಿಗೆ ಭೇಟಿ ನೀಡುತ್ತಾರೆ. ಊಟಿಗೆ ಬರುವವರು ಎಚ್ಚರಿಕೆಯಿಂದ ಇರಬೇಕು ಎಂದು ಸ್ಥಳೀಯರು ಮನವಿ ಮಾಡಿದ್ದರು.
ಊಟಿಯ ಬಹುತೇಕ ಪ್ರವಾಸಿತಾಣಗಳು ಅರಣ್ಯಕ್ಕೆ ಹೊಂದಿಕೊಂಡಿವೆ. ಹಾಗಾಗಿ, ಕಾಡೆಮ್ಮೆ, ಚಿರತೆ, ಆನೆಗಳು ಆಗಾಗ್ಗೆ ಪ್ರವಾಸಿ ತಾಣದ ವಸತಿ ಪ್ರದೇಶದ ಬಳಿ ಕಾಣಿಸಿಕೊಳ್ಳುತ್ತಿರುತ್ತವೆ. ಆದರೆ ಹುಲಿ ಕಾಣಿಸಿಕೊಂಡಿರಲಿಲ್ಲ. ಇದೇ ವರ್ಷದ ಜುಲೈನಲ್ಲಿ ಈ ಭಾಗದಲ್ಲಿ ಹುಲಿ ಕಾಣಿಸಿಕೊಂಡಿದ್ದು ವರದಿಯಾಗಿತ್ತು. ಆದರೆ, ಬೇಟೆಯಾಡಿರುವ ಪ್ರಕರಣ ವರದಿಯಾಗಿರಲಿಲ್ಲ. ಕಾಣಿಸಿಕೊಂಡಿರುವ ಹುಲಿಯನ್ನು ಸೆರೆಹಿಡಿಯಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಅರಣ್ಯ ಇಲಾಖೆಯು ಹುಲಿಯ ಚಲನವಲನಗಳ ಮೇಲೆ ನಿಗಾ ಇಟ್ಟಿದ್ದು, ಇದಕ್ಕಾಗಿ ವಿಶೇಷ ತಂಡವನ್ನು ರಚಿಸಿದೆ.
ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.