ಬೆಂಗಳೂರು(Bengaluru): ಯಶಸ್ವಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೆ ಕಾಂತಾರ ಚಿತ್ರದ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಅವರು ಕ್ರಿಕೆಟಿಗ 360 ಡಿಗ್ರಿ ಬ್ಯಾಟರ್ ಖ್ಯಾತಿಯ ಎಬಿ ಡಿವಿಲಿಯರ್ಸ್ ಅವರನ್ನು ಭೇಟಿಯಾಗಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.
ರಿಯಲ್ 360 ಸೂಪರ್ ಹೀರೊ ಅವರನ್ನು ಭೇಟಿಯಾದೆ. ಅವರು ನಮ್ಮ ಬೆಂಗಳೂರಿಗೆ ಮರಳಿ ಬಂದಿದ್ದಾರೆ ಎಂದು ವಿಡಿಯೊ ಹಂಚಿಕೊಂಡಿದ್ದಾರೆ.
ಕಳೆದ ವರ್ಷದ ನವೆಂಬರ್‌ನಲ್ಲಿ ಎಬಿ ಡಿವಿಲಿಯರ್ಸ್ ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದರು.
ಎಬಿ ಡಿವಿಲಿಯರ್ಸ್ ಅವರನ್ನು ರಿಷಬ್ ಭೇಟಿಯಾದ ವಿಡಿಯೊವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಅಭಿಮಾನಿಗಳು ಸಂಭ್ರಮಿಸಿದ್ದಾರೆ.
Saval TV on YouTube