ಮನೆ ಅಪರಾಧ ಮುರುಘಾ ಶ್ರೀಗಳ ವಿರುದ್ಧ 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ ಪೊಲೀಸರು

ಮುರುಘಾ ಶ್ರೀಗಳ ವಿರುದ್ಧ 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ ಪೊಲೀಸರು

0

ಚಿತ್ರದುರ್ಗ(Chitraduga): ಚಿತ್ರದುರ್ಗದ ಮುರುಘಾ ರಾಜೇಂದ್ರ ಬೃಹನ್ಮಠದ ಶಿವಮೂರ್ತಿ ಶರಣರ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣದ ತನಿಖೆ ನಡೆಸಿರುವ ಡಿವೈಎಸ್’ಪಿ ಅನಿಲ್ ನೇತೃತ್ವದ ತಂಡ ಎರಡನೇ ಅಪರ ಜಿಲ್ಲಾ & ಸತ್ರ ನ್ಯಾಯಾಲಯಕ್ಕೆ ಒಟ್ಟು 694 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

 ಮುರುಘಾ ಸ್ವಾಮಿ ವಿರುದ್ಧ ಎರಡು ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಈಗ ಮೊದಲ ಪ್ರಕರಣಕ್ಕೆ ಸಂಬಂಧ ಪೊಲೀಸರು ಆರೋಪಪಟ್ಟಿ ಸಲ್ಲಿಕೆ ಮಾಡಲಾಗಿದೆ. ಅಲ್ಲದೇ ಅಟ್ರಾಸಿಟಿ ಮತ್ತು ಧಾರ್ಮಿಕ ಕೇಂದ್ರ ದುರುಪಯೋಗ ಕಾಯ್ದೆಯಡಿ ಕೇಸ್ ದಾಖಲಾಗಿದೆ.

ಮತ್ತು ಬರುವ ಔಷಧಿ ನೀಡಿ  ಅತ್ಯಾಚಾರ, ಜೀವ ಬೆದರಿಕೆ

ಲೇಡಿ ವಾರ್ಡನ್ ರಶ್ಮಿ ಮೂಲಕ ಬಾಲಕಿಯರನ್ನು ಕರೆಸಿ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿರುವ ಆರೋಪ ಮುರುಘಾ ಸ್ವಾಮಿ ವಿರುದ್ಧ ಕೇಳಿಬಂದಿದೆ. ಮತ್ತು ಬರುವ ಔಷಧಿ ಬೆರೆಸಿದ ಸೇಬು ನೀಡಿ ಮಕ್ಕಳನ್ನು  ಕಚೇರಿ, ಬೆಡ್ ರೂಂ, ಬಾತ್ ರೂಂಗೆ ಕರೆದೊಯ್ದು ಬಲತ್ಕಾರ ಮಾಡಲಾಗಿದೆ. ಹತ್ತಕ್ಕೂ ಹೆಚ್ಚು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಗಂಭೀರ ಆರೋಪ ಕೇಳಿ ಬಂದಿದೆ. ವಿದ್ಯಾರ್ಥಿಗಳು ಇದಕ್ಕೆ ವಿರೋಧಿಸಿದರೆ ವಾರ್ಡನ್ ರಶ್ಮಿ ಜೀವ ಬೆದರಿಕೆ ಹಾಕ್ತಿದ್ದರು ಎಂದು ತಿಳಿದು ಬಂದಿದೆ.

ಸದ್ಯ ಮಠದ ಹಾಸ್ಟೆಲ್’ನಲ್ಲಿದ್ದ ಮತ್ತಷ್ಟು ಮಕ್ಕಳ ವಿಚಾರಣೆ ನಡೆಸಲಾಗುತ್ತಿದೆ. ಸಂತ್ರಸ್ತರ ಹೇಳಿಕೆ ಅಧರಿಸಿ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಈ ವೇಳೆ ಮತ್ತಷ್ಟು ಮಕ್ಕಳು ದೂರು ನೀಡಿದರೆ ಮುರುಘಾ ಸ್ವಾಮಿಗೆ ಕಂಟಕ ಎದುರಾಗಲಿದೆ.

ಆಂಧ್ರ ಮೂಲದ ಬಾಲಕಿಯ ರೇಪ್ & ಮರ್ಡರ್?

ಕೆಲ ವರ್ಷದ ಹಿಂದೆ ಓರ್ವ ಬಾಲಕಿಯ ರೇಪ್ & ಮರ್ಡರ್ ನಡೆದಿತ್ತು ಎಂಬ ಸಂತ್ರಸ್ತ ಬಾಲಕಿಯರ ಹೇಳಿಕೆ ಆಧರಿಸಿ ಪೊಲೀಸರ ತನಿಖೆ ನಡೆಸುತ್ತಿದ್ದಾರೆ. ಆಂಧ್ರ ಪ್ರದೇಶ ಮೂಲದ ಬಾಲಕಿ ಮಠದ ಹಾಸ್ಟೆಲ್’ನಲ್ಲಿದ್ದಳು. ಆಂಧ್ರಕ್ಕೆ ತೆರಳಿದ್ದ ವೇಳೆ ಅಪಘಾತದಲ್ಲಿ ಸಾವನ್ನಪ್ಪಿದ್ದಾಳೆ ಎಂಬ ಮಾಹಿತಿಯನ್ನು ಪೊಲೀಸರು ಕಲೆ ಹಾಕಿದ್ದಾರೆ. ಆದರೆ ಈ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ ಎಂದು ತಿಳಿದು ಬಂದಿದೆ. ಈ ಬಗ್ಗೆ ಸಂತ್ರಸ್ತ ಮಕ್ಕಳು ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಆ ಬಾಲಕಿ ಯಾರು? ಅಪಘಾತ ಯಾವಾಗ ಮತ್ತು ಎಲ್ಲಿ ನಡೆದಿದೆ ಎಂಬುದರ ಬಗ್ಗೆ ಪೊಲೀಸರು ಮಾಹಿತಿ ಕಲೆ ಹಾಕಿದ್ದಾರೆ.

ಆರೋಪಿಗಳ ವಿವರ

A1ಮುರುಘಾ ಸ್ವಾಮಿ, A2 ಲೇಡಿ ವಾರ್ಡನ್ (ರಶ್ಮಿ), A 4 ಕಾರ್ಯದರ್ಶಿ ಪರಮಶಿವಯ್ಯ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ. A 3 ಮಠದ ಉತ್ತರಾಧಿಕಾರಿ, A5 ವಕೀಲ ಗಂಗಾಧರಯ್ಯ ಭಾಗಿ ಆಗಿರುವ ಮಾಹಿತಿ ಇಲ್ಲ. ತನಿಖೆ ಮುಂದುವರಿಕೆ ಎಂದು ಮಾಹಿತಿ ನೀಡಲಾಗಿದೆ.