ಮನೆ ಅಪರಾಧ ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ಇಬ್ಬರು ಮಹಿಳೆಯರ ಸಾವು

ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿ: ಇಬ್ಬರು ಮಹಿಳೆಯರ ಸಾವು

0

ಚಿತ್ರದುರ್ಗ(Chitradurga): ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಓರ್ವನಿಗೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಚಿಕ್ಕಬೆನ್ನೂರು ಸಮೀಪ ನಡೆದಿದೆ.

ಮಹಾರಾಷ್ಟ್ರ ಮೂಲದ ಮಾನ್ಸಿ (40) ಹಾಗೂ ಉಜ್ವಲ್‌ ಬಾರ್ವಿ (44) ಮೃತರು.

ಕಾರಿಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ತಿರುಪತಿ ದರ್ಶನ ಮುಗಿಸಿ ವಾಪಸ್ ಮಹಾರಾಷ್ಟ್ರಕ್ಕೆ ತೆರಳುವಾಗ ಅವಘಡ ನಡೆದಿದೆ.

ಗಾಯಾಳು ಸಚ್ಚಿನ್ ಬಾರ್ವಿ ಅವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಭರಮಸಾಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.