ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮಂಗಳೂರು: ನಗರದ ಹೊರವಲಯದಲ್ಲಿರುವ ಗಂಜಿಮಠ ಬಳಿಯ ಮಳಲಿ ಮಸೀದಿಗೆ ಸಂಬಂಧಿಸಿದ ವ್ಯಾಜ್ಯವನ್ನು ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆ ಮಾಡಬಹುದೆಂದು ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ಬುಧವಾರ ನ್ಯಾಯಾಲಯ ತೀರ್ಪು ನೀಡಿದೆ.
ವಿಶ್ವಹಿಂದೂ ಪರಿಷತ್ನ ಅರ್ಜಿ ಸ್ವೀಕರಿಸಿದ ನ್ಯಾಯಾಲಯವು ಮಸೀದಿ ಆಡಳಿತ ಮಂಡಳಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಮಳಲಿ ಮಸೀದಿಯ ಅರ್ಜಿ ವಿಚಾರಣೆಯು ಸಿವಿಲ್ ನ್ಯಾಯಾಲಯದ ವ್ಯಾಪ್ತಿಯಲ್ಲೇ ನಡೆಯಲಿದೆ ಎಂದು ಮಂಗಳೂರಿನ ಮೂರನೇ ಹೆಚ್ಚುವರಿ ಸಿವಿಲ್ ಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಮೂಲ ದಾವೆ ಆಲಿಸಲು ವಿಚಾರಣಾಧೀನ ನ್ಯಾಯಾಲಯವು ಅಧಿಕಾರ ವ್ಯಾಪ್ತಿ ಹೊಂದಿದೆ ಎಂದು ಹೇಳಿದೆ. ನ್ಯಾಯಾಲಯವು ಕಮಿಷನರ್ ನೇಮಿಸಿ ಮಸೀದಿ ಸರ್ವೇ ಮಾಡಬೇಕೆಂದು ಒತ್ತಾಯಿಸಿ ವಿಹೆಚ್ಪಿ ಕೋರ್ಟ್ ಮೆಟ್ಟಿಲೇರಿತ್ತು. ಈ ಅರ್ಜಿ ಸ್ವೀಕರಿಸಿದ ಕೋರ್ಟ್ 2023ರ ಜನವರಿ 8ಕ್ಕೆ ವಿಚಾರಣೆ ಮುಂದೂಡಿದೆ.ಇ
ನ್ನೊಂದೆಡೆ ಮಸೀದಿ ಕಾಮಗಾರಿ ತಡೆಯಾಜ್ಞೆ ತೆರವು ಮಾಡಿ, ವಿಹೆಚ್ಪಿ ಅರ್ಜಿ ವಜಾಗೊಳಿಸುವಂತೆ ಮಸೀದಿ ಕಮಿಟಿ ಮನವಿ ಮಾಡಿತ್ತು. ಮಸೀದಿ ಆಡಳಿತ ಮಂಡಳಿ ಪರ ವಕೀಲರು ಮಸೀದಿ ವಕ್ಪ್ ಆಸ್ತಿಯಾಗಿರುವುದರಿಂದ ವಕ್ಫ್ ಟ್ರಿಬ್ಯುನಲ್’ನಲ್ಲೇ ವಿಚಾರಣೆ ನಡೆಸಬೇಕು ಎಂದು ವಾದಿಸಿದ್ದರು. ಆದರೆ ಮಸೀದಿ ಕಮಿಟಿ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಜ್ಞಾನವಾಪಿ ಮಾದರಿಯಲ್ಲೇ ಮಳಲಿ ಮಸೀದಿ ವಿವಾದದ ವಿಚಾರಣೆಯೂ ಸಾಗಲಿದೆ.