ಮೈಸೂರು(Mysuru): ಅಂತಿಮ ಮತದಾರರ ಪಟ್ಟಿ 2023 ರ ಜನವರಿ 05 ರಂದು ಪ್ರಕಟವಾಗುತ್ತದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಕೆ.ವಿ. ರಾಜೇಂದ್ರ ಅವರು ತಿಳಿಸಿದರು.
ಜಿಲ್ಲಾಡಳಿತ ಮತ್ತು ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ. 2023ರ ಕರಡು ಪಟ್ಟಿ ಪ್ರಕಟಣೆ ಹಾಗೂ ಯುವ ಮತದಾರರ ಹೆಸರು ಸೇರ್ಪಡೆಗೊಳಿಸಲು ಅರಿವು ಮೂಡಿಸುವ ಜಾಥಾ ಕಾರ್ಯಕ್ರಮಕ್ಕೆ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜು ಜೆಎಲ್ಬಿ ರಸ್ತೆ, ಮುಂಭಾಗ ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ. ರಾಜೇಂದ್ರ ಅವರು ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು ಇಂದಿನಿಂದ ಡಿಸೆಂಬರ್ 08 ರವರೆಗೂ ಮೈಸೂರು ಜಿಲ್ಲೆಯಾದ್ಯಂತ ಪ್ರಚಾರ ನಡೆಯುತ್ತದೆ ಹಾಗೂ ಮತದಾರರ ಪಟ್ಟಿಯ ವಿಶೇಷ ಪರಿವೀಕ್ಷಣೆ ಕಾರ್ಯಕ್ರಮ ನಡೆಯುತ್ತದೆ ಎಂದು ಹೇಳಿದರು.
18 ವರ್ಷ ತುಂಬಿರುವವರು ಮತದಾರರ ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಶ್ಯಕ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು ಹಾಗೂ ಚುನಾವಣಾ ವಿಶೇಷ ಅಭಿಯಾನ ಕಾರ್ಯಕ್ರಮಗಳು 2022 ರ ನವೆಂಬರ್ 12 ಮತ್ತು 20 ಹಾಗೂ ಡಿಸೆಂಬರ್ 03 ಮತ್ತು 04 ರಂದು 04 ದಿನಗಳ ಹಕ್ಕು ಆಕ್ಷೇಪಣೆಗಳನ್ನು ಸ್ವೀಕಾರ ಮಾಡುತ್ತಾರೆ. ಅರ್ಹ ಪ್ರತಿಯೊಬ್ಬರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಬಿ.ಆರ್,ಪೂರ್ಣಿಮಾ, ಮಹಾನಗರ ಪಾಲಿಕೆಯ ಆಯುಕ್ತಾರಾದ ಲಕ್ಷ್ಮಿಕಾಂತ್ ರೆಡ್ಡಿ, ಅಪರ ಜಿಲ್ಲಾಧಿಕಾರಿಗಳಾದ ಡಾ.ಮಂಜುನಾಥ್ ಸ್ವಾಮಿ, ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಸವಿತಾ ಅವರು ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.