ಮನೆ ಉದ್ಯೋಗ ಬಿಎಸ್’ಎನ್’ಎಲ್ ನಲ್ಲಿದೆ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

ಬಿಎಸ್’ಎನ್’ಎಲ್ ನಲ್ಲಿದೆ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

0

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್’ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 34 ಅಪ್ರೆಂಟಿಸ್ ಹುದ್ದೆಗಳು ಖಾಲಿ ಇವೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ನವೆಂಬರ್ 1 ರಿಂದಲೇ ಅರ್ಜಿ ಸಲ್ಲಿಕೆ ಆರಂಭವಾಗಿದೆ. ನವೆಂಬರ್ 15, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಬಿಎಸ್ಎನ್ಎಲ್’ನ ಅಧಿಕೃತ ವೆಬ್ಸೈಟ್ bsnl.co.in ಗೆ ಭೇಟಿ ನೀಡಬಹುದು.

ವಯೋಮಿತಿ:

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು ನವೆಂಬರ್ 29, 2022ಕ್ಕೆ ಗರಿಷ್ಠ 25 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

ಭಾರತ ಸರ್ಕಾರದ ನಿಯಮಾನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವಿದ್ಯಾರ್ಹತೆ:

ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾನಿಲಯದಿಂದ ಡಿಪ್ಲೊಮಾ, ತಾಂತ್ರಿಕ / ತಾಂತ್ರಿಕೇತರ ಪದವಿ ಪಡೆದಿರಬೇಕು.

ಸಂಬಂಧಿತ ವಿಭಾಗದಲ್ಲಿ ವಿಶ್ವವಿದ್ಯಾಲಯದಿಂದ ಎಂಜಿನಿಯರಿಂಗ್ ಅಥವಾ ತಂತ್ರಜ್ಞಾನದಲ್ಲಿ ಡಿಪ್ಲೋಮಾ ಪೂರ್ಣಗೊಳಿಸಿರಬೇಕು.

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 01/11/2022

ಅರ್ಜಿ ಸಲ್ಲಿಸಲು ಕೊನೆ ದಿನ: 15/11/2022