ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಕಾಂಗ್ರೆಸ್ ಯುವ ಮುಖಂಡರಾದ ರಮೇಶ್ ಗೌಡರವರ ಹುಟ್ಟುಹಬ್ಬವನ್ನು ಶಾಸಕರ ಕಚೇರಿಯಲ್ಲಿ, ಆಚರಿಸಿದರು….
ರಾಜ್ಯದ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ
ವಾರ್ತಾ ಇಲಾಖೆಯ ಆಯುಕ್ತರಾಗಿ ಹೇಮಂತ್ ನಿಂಬಾಳ್ಳರ್ ವರ್ಗಾವಣೆ
ನಯನ ಕುಮಾರ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ವತಿಯಿಂದ ವೈದ್ಯರ ದಿನಾಚರಣೆ ಅಂಗವಾಗಿ ಉಚಿತ ತಪಾಸಣಾ…..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ನವದೆಹಲಿ: ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ಅವರನ್ನು ಭಾರತದ ಮುಖ್ಯ ನ್ಯಾಯಮೂರ್ತಿ(ಸಿಜೆಐ)ಯಾಗಿ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ದೆಹಲಿ ಹೈಕೋರ್ಟ್ ಶುಕ್ರವಾರ ₹1 ಲಕ್ಷ ದಂಡದೊಂದಿಗೆ ವಜಾಗೊಳಿಸಿದೆ.
ಇದೊಂದು ‘ಪ್ರಚಾರ ಹಿತಾಸಕ್ತಿಯ ದಾವೆ’ ಎಂದು ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸುಬ್ರಮಣಿಯಮ್ ಪ್ರಸಾದ್ ಅವರ ಪೀಠವು ಹೇಳಿತು.
ಯಾವುದೇ ವಸ್ತು, ವಿಷಯವಿಲ್ಲದ ಈ ಅರ್ಜಿಯನ್ನು ಕೇವಲ ಪ್ರಚಾರ ಉದ್ದೇಶದಿಂದ ಸಲ್ಲಿಸಲಾಗಿದೆ ಎಂದು ಪೀಠ ಆಕ್ಷೇಪ ವ್ಯಕ್ತಪಡಿಸಿತು.
ಗ್ರಾಮ ಉದಯ್ ಫೌಂಡೇಶನ್ ಎಂಬ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಎಂದು ಹೇಳಿಕೊಂಡಿರುವ ಅರ್ಜಿದಾರ ಸಂಜೀವ್ ಕುಮಾರ್ ತಿವಾರಿ, ನ್ಯಾಯಮೂರ್ತಿ ಚಂದ್ರಚೂಡ್ ಅವರನ್ನು ಸಿಜೆಐ ಆಗಿ ನೇಮಕ ಮಾಡಿರುವುದನ್ನು ಆಕ್ಷೇಪಿಸಿದ್ದರು.
ಈ ನೇಮಕವು ಸಂವಿಧಾನಕ್ಕೆ ವಿರುದ್ಧವಾದದ್ದು ಎಂದು ಅವರು ಆರೋಪಿಸಿದ್ದರು.ನ್ಯಾಯಮೂರ್ತಿ ಚಂದ್ರಚೂಡ್ ಅವರು ಭಾರತದ 50ನೇ ಸಿಜೆಐ ಆಗಿ ನವೆಂಬರ್ 9 ರಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇದೇ ರೀತಿಯ ಅರ್ಜಿಯೊಂದನ್ನು ಕಳೆದ ವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು.