ಮನೆ ಅಪರಾಧ ಗುಂತಕಲ್- ಹುಬ್ಬಳ್ಳಿ ಪ್ಯಾಸೆಂಜರ್ ರೈಲಿನಲ್ಲಿ ವ್ಯಕ್ತಿಯ ಬರ್ಬರ ಕೊಲೆ

ಗುಂತಕಲ್- ಹುಬ್ಬಳ್ಳಿ ಪ್ಯಾಸೆಂಜರ್ ರೈಲಿನಲ್ಲಿ ವ್ಯಕ್ತಿಯ ಬರ್ಬರ ಕೊಲೆ

0

ಹುಬ್ಬಳ್ಳಿ: ಗುಂತಕಲ್- ಹುಬ್ಬಳ್ಳಿ ಪ್ಯಾಸೆಂಜರ್ ರೈಲಿನ ಸಾಮಾನ್ಯ ಬೋಗಿಯಲ್ಲಿ ಗುರುವಾರ ತಡರಾತ್ರಿ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ವರದಿಯಾಗಿದೆ.

ರೈಲು ತಡರಾತ್ರಿ ಬ್ಯಾಹಟ್ಟಿಗೆ ಬಂದಾಗ ವ್ಯಕ್ತಿಯ ಕೊಲೆಯಾಗಿರುವುದು ಕಂಡುಬಂದಿದ್ದು, ಸ್ಥಳಕ್ಕೆ ರೈಲ್ವೆ ಪೊಲೀಸರು ತೆರಳಿ ಪರಿಶೀಲಿಸಿದ್ದಾರೆ.

ರೈಲಿನ ಸಿಬ್ಬಂದಿಯು ಆ ಬೋಗಿಯನ್ನು ಪ್ರತ್ಯೇಕಿಸಿ ಬ್ಯಾಹಟ್ಟಿಯಲ್ಲೇ ನಿಲ್ಲಿಸಿದ್ದಾರೆ. ಕೊಲೆಯಾದ ವ್ಯಕ್ತಿ ಯಾರು ಹಾಗೂ ಯಾವ ಕಾರಣಕ್ಕಾಗಿ ಯಾರು ಹತ್ಯೆಗೈದಿದ್ದಾರೆಂದು ಪೊಲೀಸರು ತನಿಖೆ ಕೈಗೊಂಡಿದ್ದಾರೆ.