ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು: ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ, ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗರಾದ ಎಚ್.ಡಿ. ದೇವೇಗೌಡ ಅವರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯದ ಬಿಜೆಪಿ ಸರ್ಕಾರ ಆಹ್ವಾನಿಸದೇ ಇರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ ಎಂದು ಜೆಡಿಎಸ್ ಟ್ವೀಟ್ ಮೂಲಕ ಕಿಡಿಕಾರಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ನಾಡಪ್ರಭುಗಳ ಪ್ರತಿಮೆ ಸ್ಥಾಪನೆಯ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿಗಳನ್ನು ಆಹ್ವಾನಿಸಿದ ಬಿಜೆಪಿ ಸರಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಅವರನ್ನು ಆಹ್ವಾನ ಮಾಡಲಿಲ್ಲ, ಯಾಕೆ? ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಲೇಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ ಎಂದು ಹೇಳಿದೆ.
ರಾಜ್ಯದ ಬಿಜೆಪಿ ಸರಕಾರ, ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೇ ಮಾಡಿದ ಅಪಮಾನ. ಇದು ಅಕ್ಷಮ್ಯದ ಪರಮಾವಧಿ ಎಂದಿದೆ.
ಸರ್ವ ಜನರನ್ನು ಸಮಾನವಾಗಿ ಕಂಡು ಆದರ್ಶ ಪ್ರಭುವಾಗಿದ್ದ ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆಯುವ ಕೆಲಸವನ್ನು ಸ್ವತಃ ಪ್ರಧಾನಿ ನರೇಂದ್ರಮೋದಿ ಅವರೇ ಮಾಡಿರುವುದು ಸ್ಪಷ್ಟ. ಇದು ಅತ್ಯಂತ ದುರದೃಷ್ಟಕರ. ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ ಎನ್ನುವುದು ಸತ್ಯ ಎಂದು ಜೆಡಿಎಸ್ ಕುಟುಕಿದೆ.
7ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯ ಸರಕಾರ ಹಾಗೂ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ ಎನ್ನುವುದರಲ್ಲಿ ಸಂಶಯ ಇಲ್ಲ. ಮಾನ್ಯ ದೇವೇಗೌಡರ ಬಗ್ಗೆ ಅತೀವ ಗೌರವ ಇಟ್ಟುಕೊಂಡಿರುವ ಪ್ರಧಾನಿಗಳ ಬಗ್ಗೆಯೇ ಕನ್ನಡಿಗರಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ರಾಜ್ಯ ಬಿಜೆಪಿ ಸರಕಾರ ಮತ್ತು ಬಿಜೆಪಿ ನಾಯಕರು ವರ್ತಿಸಿದ್ದಾರೆ ಎಂದು ಆರೋಪಿಸಿದೆ.
ಕೆಂಪೇಗೌಡರು ಬಿಜೆಪಿಯ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ. ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ. ನಮ್ಮೆಲ್ಲರ ಅರಾಧ್ಯದೈವ. ಇನ್ನು, ಬೆಂಗಳೂರು ನಗರ ನಮ್ಮೆಲ್ಲರದ್ದು. ಸಮಸ್ತ ಕನ್ನಡಿಗರ ಜೀವನಾಡಿ. ಈ ಸೂಕ್ಷ್ಮವನ್ನು ರಾಜ್ಯ ಬಿಜೆಪಿ ಸರಕಾರ ಮರೆತು ಕನ್ನಡಿಗರನ್ನು ಅಪಮಾನಿಸಿದೆ ಎಂದು ಟೀಕಿಸಿದೆ.