ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ತಾಲ್ಲೂಕು ಮತ್ತು ಜಿಲ್ಲಾ ಪಂಚಾಯಿತಿಗಳಿಗೆ ಚುನಾವಣೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ನಿರಾಕರಿಸಿದೆ.
ಇಂದು ಅರ್ಜಿ ವಿಚಾರಣೆ ನಡೆಸಿದ ನ್ಯಾ.ಅನಿರುದ್ದ ಬೋಸ್ ನೇತೃತ್ವದ ದ್ವಿಸದಸ್ಯ ಪೀಠ ನಾವು ಮಧ್ಯಪ್ರವೇಶ ಮಾಡುವ ಅಗತ್ಯ ಕಂಡುಬರುವುದಿಲ್ಲ ಎಂದು ಹೇಳಿದೆ.
ಮೀಸಲಾತಿ ಕ್ಷೇತ್ರ ಮರು ವಿಂಗಡಣೆಗಾಗಿ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ 12 ವಾರಗಳ ಕಾಲಾವಕಾಶ ನೀಡಿದೆ.
ಇನ್ನು ಕೆಲವೇ ದಿನಗಳಲ್ಲಿ ಈ ಕಾಲಾವಕಾಶ ಅಂತ್ಯವಾಗಲಿದೆ. ಮುಖ್ಯ ಪ್ರಕರಣವೂ ಹೈಕೋರ್ಟ್ ನಲ್ಲಿ ಬಾಕಿ ಇರುವಾಗ ನಾವು ಈ ಅರ್ಜಿ ವಿಚಾರಣೆ ನಡೆಸಲು ಸಾಧ್ಯವಿಲ್ಲ. ಈ ಹಿನ್ನೆಲೆ ನೀವು ಮತ್ತೆ ಹೈಕೋರ್ಟ್ ಗೆ ಹೋಗಿ ಎಂದು ಆಯೋಗಕ್ಕೆ ಪೀಠ ಹೇಳಿದೆ.
ಕಳೆದ ವರ್ಷ ಏಪ್ರಿಲ್, ಮೇ ಮತ್ತು ಜೂನ್ ವೇಳೆಗೆ ಅವಧಿ ಪೂರ್ಣಗೊಂಡ ರಾಜ್ಯದ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತ್ ಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ಎಲ್ಲಾ ಸಿದ್ದತೆಗಳನ್ನು ಮಾಡಿಕೊಂಡಿತ್ತು. ಕ್ಷೇತ್ರ ಪುನರ್ ವಿಂಗಡಣೆ ಮಾಡಿ, ಮತದಾರರ ಅಂತಿಮ ಪಟ್ಟಿ ಪ್ರಕಟಿಸಿತ್ತು. ಅಂತೆಯೇ ಮೀಸಲಾತಿ ಕರಡು ಸಹ ಪ್ರಕಟಿಸಲಾಗಿತ್ತು. ಚುನಾವಣೆಗೆ ದಿನಾಂಕ ಘೋಷಿಸುವ ವೇಳೆಗೆ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದಿದ್ದ ರಾಜ್ಯ ಸರ್ಕಾರ ಪ್ರತ್ಯೇಕವಾಗಿ ಸೀಮಾ ನಿರ್ಣಯ ಆಯೋಗ ರಚಿಸಿತ್ತು. ಇದರಿಂದಾಗಿ ಚುನಾವಣೆ ನಡೆಸಲಾಗದ ಆಯೋಗ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿತ್ತು.
ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಸರ್ಕಾರದ ಮನವಿಯಂತೆ ಮೀಸಲಾತಿ ಪ್ರಕಟಿಸಲು, ಕ್ಷೇತ್ರ ಮರುವಿಂಗಡಣೆಗೆ 12 ವಾರಗಳ ಕಾಲಾವಕಾಶ ನೀಡಿತ್ತು. ಇದನ್ನು ಪ್ರಶ್ನಿಸಿ ಆಯೋಗ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು.