ಮನೆ ಉದ್ಯೋಗ ಸಿಎಫ್’ಟಿಆರ್’ಐ ನಲ್ಲಿ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

ಸಿಎಫ್’ಟಿಆರ್’ಐ ನಲ್ಲಿ ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ

0

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆಯಲ್ಲಿ ಒಂದು ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರಮನೆ ನಗರಿಯಲ್ಲಿ ವೃತ್ತಿ ಮಾಡಬಯಸುವವರಿಗೆ ಇದೊಂದು ಸುವರ್ಣಾವಕಾಶವಾಗಿದೆ. ಅರ್ಜಿ ಸಲ್ಲಿಸಲು ನವೆಂಬರ್ 12, 2022 ಅಂದರೆ ನಾಳೆ ಕೊನೆಯ ದಿನವಾಗಿದ್ದು, ಆಸಕ್ತರು ಈ ಕೂಡಲೇ ಅಪ್ಲಿಕೇಶನ್ ಹಾಕಿ. ಹೆಚ್ಚಿನ ಮಾಹಿತಿಗೆ ಅಧಿಕೃತ ವೆಬ್’ಸೈಟ್ cftri.res.in ಭೇಟಿ ಕೊಡಿ.

ವಿದ್ಯಾರ್ಹತೆ:

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಲ್ಲಿ ಕಡ್ಡಾಯವಾಗಿ ಮೈಕ್ರೋ ಬಯಾಲಜಿ/ಬಯೋಟೆಕ್ನಾಲಜಿ/ ಬಯೋಕೆಮಿಸ್ಟ್ರಿ ವಿಭಾಗದಲ್ಲಿ ಬಿಎಸ್ಸಿ ಪೂರ್ಣಗೊಳಿಸಿರಬೇಕು.

ವಯೋಮಿತಿ:

ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಯ ವಯಸ್ಸು ನವೆಂಬರ್ 12, 2022ಕ್ಕೆ ಗರಿಷ್ಠ 50 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:

ಪ್ರಾಜೆಕ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಹಾಕುವ ಅಭ್ಯರ್ಥಿಗಳಿಗೆ ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ:

ಯಾವುದೇ ಅರ್ಜಿ ಶುಲ್ಕ ಇಲ್ಲ

ವೇತನ: ಮಾಸಿಕ ₹ 15,000

ಆಯ್ಕೆ ಪ್ರಕ್ರಿಯೆ:

ಲಿಖಿತ ಪರೀಕ್ಷೆ

ಸಂದರ್ಶನ

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 10/11/2022

ಅರ್ಜಿ ಸಲ್ಲಿಸಲು ಕೊನೆ ದಿನ : 12/11/2022