ಮನೆ ಕ್ರೀಡೆ ಐಸಿಸಿ ಅಧ್ಯಕ್ಷರಾಗಿ ಗ್ರೆಗ್ ಬಾರ್ಕ್ಲೆ ಮರು ಆಯ್ಕೆ

ಐಸಿಸಿ ಅಧ್ಯಕ್ಷರಾಗಿ ಗ್ರೆಗ್ ಬಾರ್ಕ್ಲೆ ಮರು ಆಯ್ಕೆ

0

ದುಬೈ: ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) ಅಧ್ಯಕ್ಷರಾಗಿ ಗ್ರೆಗ್ ಬಾರ್ಕ್ಲೇ ಅವರು ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ.

ಶನಿವಾರ ಮೆಲ್ಬೋರ್ನ್‌ನಲ್ಲಿ ನಡೆದ ಐಸಿಸಿ ಮಂಡಳಿ ಸಭೆಯಲ್ಲಿ ಈ ಆಯ್ಕೆ ನಡೆದಿದೆ.  ಜಿಂಬಾಬ್ವೆಯ ತವೆಂಗ್ವಾ ಮುಕುಲಾನಿ ಸ್ಪರ್ಧೆಯಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಗ್ರೆಗ್ ಬಾರ್ಕ್ಲೆ ಅವಿರೋಧವಾಗಿ ಆಯ್ಕೆಯಾದರು.

ಐಸಿಸಿ ಅಧ್ಯಕ್ಷರಾಗಿ ಮರು ಆಯ್ಕೆಯಾಗಿರುವುದು ತಮಗೆ ಸಂದ ಗೌರವವಾಗಿದ್ದು, ಇದಕ್ಕಾಗಿ ನಿರ್ದೇಶಕ ಮಂಡಳಿಯ ಸದಸ್ಯರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದು ಬಾರ್ಕ್ಲೆ ಪ್ರತಿಕ್ರಿಯಿಸಿದ್ದಾರೆ.

ಆಕ್ಲೆಂಡ್ ಮೂಲದ ವಕೀಲರಾಗಿರುವ ಬಾರ್ಕ್ಲೆ, ನ್ಯೂಜಿಲೆಂಡ್ ಕ್ರಿಕೆಟ್‌ ಮತ್ತು 2015ರ ವಿಶ್ವಕಪ್ ಟೂರ್ನಿಯ ನಿರ್ದೇಶಕರಾಗಿ ಕಾರ್ಯನಿರ್ವಹಿಸಿದ್ದರು.