ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು(Bengaluru): ಕೇಸರಿ ಬಣ್ಣ ಭಾರತದ ಧ್ವಜದಲ್ಲಿಯೇ ಇದೆ. ಕೇಸರಿ ಕಂಡರೆ ಏಕೆ ಸಿಟ್ಟು? ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಶ್ನಿಸಿದ್ದಾರೆ.
ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಜನ್ಮದಿನದ ಅವರ ಅಂಗವಾಗಿ ಇಂದು ವಿಧಾನಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಈ ವೇಳೆ ಶಾಲೆಗಳಿಗೆ ಕೇಸರಿ ಬಣ್ಣ ಬಳಿಯುತ್ತಿರುವ ಬಗ್ಗೆ ಕಾಂಗ್ರೆಸ್ ವಿರೋಧದ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಸ್ವಾಮಿ ವಿವೇಕಾನಂದರ ಹೆಸರಿನಲ್ಲಿಯೇ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುತ್ತಿದ್ದು, ಅವರೊಬ್ಬ ಸನ್ಯಾಸಿ. ಅವರು ತೊಟ್ಟಿದ್ದು ಕೇಸರಿ ಬಣ್ಣದ ಕಾವಿ. ವಿವೇಕ ಎಂದರೆ ಎಲ್ಲರಿಗೂ ಜ್ಞಾನ, ಅದನ್ನು ಕಲಿಯಲಿ. ಎಲ್ಲದರಲ್ಲೂ ರಾಜಕಾರಣ ಮಾಡುವುದು ಬಹಳ ಕೆಳಮಟ್ಟದ್ದು ಬೇಸರ ವ್ಯಕ್ತಪಡಿಸಿದ್ದಾರೆ.
ಭಾರತದ ಉದಯಕ್ಕೆ ಪರಿಶ್ರಮ ಪಟ್ಟವರು ನೆಹರು:
ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಮುನ್ನಡೆಸಿದ ಖ್ಯಾತಿ ಭಾರತದ ಪ್ರಥಮ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರೂ ಅವರಿಗೆ ಸಲ್ಲುತ್ತದೆ. ಮಕ್ಕಳನ್ನು ಅತ್ಯಂತ ಪ್ರೀತಿ ಮತ್ತು ವಾತ್ಸಲ್ಯದಿಂದ ಕಾಣುತ್ತಿದ್ದ ನೆಹರೂ ಅವರ ಜನ್ಮದಿನವನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ನೆಹರೂ ಅವರು ಮಹಾತ್ಮಾ ಗಾಂಧೀಜಿಯವರೊಂದಿಗೆ ನಿಕಟ ಸಂಬಂಧ ಹೊಂದಿದ್ದು, ಸ್ವಾತಂತ್ರ್ಯ ಹೋರಾಟದಲ್ಲಿ ಮಹಾತ್ಮಾ ಗಾಂಧಿ ಅವರೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಕೆಲಸ ಮಾಡಿದವರು. ಭಾರತದ ಉದಯಕ್ಕೆ ಬಹಳಷ್ಟು ಪರಿಶ್ರಮ ಪಟ್ಟವರು ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಚಿವ ಹಾಲಪ್ಪ ಆಚಾರ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮೊದಲಾದವರು ಉಪಸ್ಥಿತರಿದ್ದರು.