ಮನೆ ಕ್ರೀಡೆ ಐಸಿಸಿ ಟ್ವೆಂಟಿ-20 ವಿಶ್ವಕಪ್ ತಂಡದಲ್ಲಿ ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಸ್ಥಾನ

ಐಸಿಸಿ ಟ್ವೆಂಟಿ-20 ವಿಶ್ವಕಪ್ ತಂಡದಲ್ಲಿ ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್ ಸ್ಥಾನ

0

ಮೆಲ್ಬರ್ನ್: ಐಸಿಸಿ ಟ್ವೆಂಟಿ-20 ವಿಶ್ವಕಪ್ ಟೂರ್ನಿಯ ‘ಅತ್ಯಂತ ಮೌಲ್ಯಯುತ ತಂಡ’ದಲ್ಲಿ ಭಾರತದ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ಸೂರ್ಯಕುಮಾರ್ ಯಾದವ್ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.

ಸೆಮಿಫೈನಲ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಸೋತ ಭಾರತ ತಂಡದ ಟ್ರೋಫಿ ಕನಸು ಭಗ್ನಗೊಂಡಿತ್ತು.ಆದರೆ ಟೂರ್ನಿಯುದ್ಧಕ್ಕೂ ಅಮೋಘ ಬ್ಯಾಟಿಂಗ್ ಪ್ರದರ್ಶಿಸಿದ ಕೊಹ್ಲಿ, 98.66ರ ಸರಾಸರಿಯಲ್ಲಿ 296 ರನ್ ಗಳಿಸಿದ್ದರು.

ಈ ಮೂಲಕ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಎನಿಸಿದ್ದಾರೆ.