ಮನೆ ರಾಜಕೀಯ ಸಿಎಂ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡ ಕಾಂಗ್ರೆಸ್ ಮುಖಂಡ ರವಿರಾಜ ಕೊರವಿ

ಸಿಎಂ ಬೊಮ್ಮಾಯಿ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಗೊಂಡ ಕಾಂಗ್ರೆಸ್ ಮುಖಂಡ ರವಿರಾಜ ಕೊರವಿ

0

ಕಲಬುರಗಿ: ಜಿಲ್ಲಾ ಕೋಲಿ ಸಮಾಜದ ಅಧ್ಯಕ್ಷ ಕಾಂಗ್ರೆಸ್ ಮುಖಂಡ ರವಿರಾಜ ಕೊರವಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಬುಧವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಈ ಮೂಲಕ ಕಾಂಗ್ರೆಸ್ ಪಕ್ಷದ ಪ್ರಮುಖ ವಿಕೆಟ್ ಪತನವಾಗಿದೆ. ಕಲಬುರಗಿ ಸಂಸದ ಡಾ. ಉಮೇಶ ಜಾಧವ, ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ, ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಈ ಸಂದರ್ಭದಲ್ಲಿ ಇದ್ದರು.

2016ರಲ್ಲಿ ನಡೆದ ಜಿ.ಪಂ ಚುನಾವಣೆಯಲ್ಲಿ ಕೋಡ್ಲಿ ಕ್ಷೇತ್ರದಿಂದ ಪಕ್ಷೇತರರಾಗಿ ಸ್ಪರ್ಧಿಸಿ ಕೆಲವೇ ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ರಾಮಲಿಂಗಾರೆಡ್ಡಿ ದೇಶಮುಖ ಎದುರು ಪರಾಭವಗೊಂಡಿದ್ದರು. ಇದಕ್ಕೂ ಮೊದಲು 2011ರಲ್ಲಿ ನಡೆದ ಚುನಾವಣೆಯಲ್ಲಿ ರವಿರಾಜ ಪತ್ನಿ ಸುನಂದಾ ಕೊರವಿ ಚಿಮ್ಮನಚೋಡ ಜಿ.ಪಂ ಮತಕ್ಷೇತ್ರದಿಂದ ಬಿಜೆಪಿಯಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ 2016ರಲ್ಲಿ ಬಿಜೆಪಿ ಟಿಕೆಟ್ ಸಿಗದಿದ್ದಾಗ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಇವರು ಕಾಂಗ್ರೆಸ್ ಹಿರಿಯ ಮುಖಂಡ ಮಾಜಿ ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ ಅವರ ಅಳಿಯ.