ಮನೆ ಸುದ್ದಿ ಜಾಲ ಮೈಸೂರು: ಕೊನೆಗೂ ಸೆರೆ ಸಿಕ್ಕ ಮೊಸಳೆ- ನಿಟ್ಟುಸಿರು ಬಿಟ್ಟ ಸ್ಥಳೀಯರು

ಮೈಸೂರು: ಕೊನೆಗೂ ಸೆರೆ ಸಿಕ್ಕ ಮೊಸಳೆ- ನಿಟ್ಟುಸಿರು ಬಿಟ್ಟ ಸ್ಥಳೀಯರು

0

ಮೈಸೂರು(Mysuru): ಹಲವು ದಿನಗಳಿಂದ ಆತಂಕ ಸೃಷ್ಟಿಸಿದ್ದ ಮೊಸಳೆ ಕೊನೆಗೂ ಸೆರೆ ಸಿಕ್ಕಿದ್ದು,  ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.

ಅರಣ್ಯ ಇಲಾಖೆ, ಮೈಸೂರು ಮೃಗಾಲಯ ಹಾಗೂ ಮೈಸೂರು ಮಹಾನಗರ ಪಾಲಿಕೆಯು ಸ್ಥಳೀಯರ ನೆರವಿನಿಂದ ನಡೆಸಿದ ಕಾರ್ಯಾಚರಣೆ ಯಶಸ್ವಿಯಾಗಿದೆ.

ರಾಮಾನುಜಾ ರಸ್ತೆಯ 9 ನೇ ಕ್ರಾಸ್ ಬಳಿ ಚರಂಡಿ ನೀರಿನಲ್ಲಿ ಕಳೆದ ಒಂದು ತಿಂಗಳಿಂದ ಹತ್ತಾರು ಬಾರಿ ಕಾಣಿಸಿಕೊಂಡಿದ್ದ ಮೊಸಳೆ ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿತ್ತು. ಕೆಲವು ದಿನಗಳ ಹಿಂದೆ ಕರುವೊಂದನ್ನು ಬಲಿ ಪಡೆದಿತ್ತು. ಮೊಸಳೆಯನ್ನು ಸೆರೆ ಹಿಡಿಯುವಂತೆ ಸ್ಥಳೀಯ ನಿವಾಸಿಗಳು ತೀವ್ರ ಒತ್ತಡ ಹೇರಿದ್ದರು. ಅರಣ್ಯಾಧಿಕಾರಿಗಳು ನಡೆಸಿದ ಕೆಲವು ಪ್ರಯತ್ನಗಳು ವಿಫಲವಾಗಿದ್ದವು.

ಇಂದು ಕಾರ್ಯಾಚರಣೆಯನ್ನು ತೀವ್ರಗೊಳಿಸಿದ ಸಿಬ್ಬಂದಿಗಳು ಮೊಸಳೆಯನ್ನು  ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಸ್ಥಳೀಯ ಕಾರ್ಪೊರೇಟರ್ ಹಾಗೂ ಶಾಸಕ ರಾಮದಾಸ್ ಸಹ ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆಗೆ ಸಹಕರಿಸಿದ್ದರು.

ಸೆರೆ ಸಿಕ್ಕ ಮೊಸಳೆಯನ್ನು ಕಬಿನಿ ಜಲಾಶಯದಲ್ಲಿ ಬಿಡುವುದಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.