Saval TV on YouTube
ಬೆಂಗಳೂರು: ರಾಜ್ಯದಲ್ಲಿ ಮತ್ತೆ ನಾಲ್ವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಮಾಡಿದೆ.
ಕೋಲಾರ ಎಸ್.ಪಿ.ಸಚಿನ್ ಘೋರ್ಪಡೆ ಅವರನ್ನು ವರ್ಗಾವಣೆ ಮಾಡಿ ಬೆಂಗಳೂರು ಉತ್ತರ ವಿಭಾಗದ ಸಂಚಾರಿ ಆಯುಕ್ತರ ಹುದ್ದೆಗೆ ವರ್ಗಾಯಿಸಲಾಗಿದೆ.
ಬೆಂಗಳೂರು ಉತ್ತರ ವಿಭಾಗದ ಸಂಚಾರಿ ಉಪ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಎಸ್.ಸವಿತಾ ಅವರನ್ನು, ಅಪರಾಧ ತನಿಖಾ ಇಲಾಖೆ ಪೊಲೀಸ್ ಸೂಪರಿಂಟೆಂಡೆಂಟ್ ಹುದ್ದೆಗೆ, ಡಾ.ಅರುಣ್ ಕೆ ಅವರನ್ನು ಕಲಬುರ್ಗಿಯ ಪೊಲೀಸ್ ತರಬೇತಿ ಶಾಲೆಯ ಉಪ ಪ್ರಾಂಶುಪಾಲ ಹಾಗೂ ಪೊಲೀಸ್ ಸೂಪರಿಂಟೆಂಡೆಂಟ್ ಹುದ್ದೆಗೆ ವರ್ಗಾಯಿಸಲಾಗಿದ್ದು, ಡಾ.ಎಸ್.ಕೆ.ಸೌಮ್ಯಲತಾ ಅವರನ್ನು ರೈಲ್ವೆಯ ಪೊಲೀಸ್ ಸೂಪರಿಂಟೆಂಡೆಂಟ್ ಹುದ್ದೆಗೆ ನೇಮಿಸಲಾಗಿದೆ.















