ಮನೆ ರಾಷ್ಟ್ರೀಯ ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಸರಣಿ ಅಪಘಾತ: 48 ವಾಹನಗಳು ಜಖಂ, 15 ಮಂದಿಗೆ ಗಾಯ

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಸರಣಿ ಅಪಘಾತ: 48 ವಾಹನಗಳು ಜಖಂ, 15 ಮಂದಿಗೆ ಗಾಯ

0

ಪುಣೆ(Pune): ಪುಣೆಯ ನಾವಲೆ ಸೇತುವೆಯಲ್ಲಿ ನಿಯಂತ್ರಣ ಕಳೆದುಕೊಂಡ ಟ್ರಕ್, ಹಲವಾರು ವಾಹನಗಳಿಗೆ ಡಿಕ್ಕಿ ಹೊಡೆದು ಕನಿಷ್ಠ 15 ಮಂದಿ ಗಾಯಗೊಂಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.

ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಸಂಭವಿಸಿದ ಅಪಘಾತದಲ್ಲಿ 48 ವಾಹನಗಳು ಜಖಂ ಆಗಿವೆ ಎಂದು ಪುಣೆ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ (ಪಿಎಂಆರ್‌ಡಿಎ) ಅಗ್ನಿಶಾಮಕ ದಳ ತಿಳಿಸಿದೆ.

ಸ್ಥಳೀಯ ಮಾಧ್ಯಮಗಳ ಪ್ರಕಾರ ಸೇತುವೆಯಲ್ಲಿ ಕೆಳಮುಖವಾದ ಇಳಿಜಾರಿನಲ್ಲಿ ಟ್ರಕ್ ಬ್ರೇಕ್ ಫೇಲ್ ಆಗಿರುವುದು ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.