ಅಹಮದಾಬಾದ್: 2008ರ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರಕರಣದ 38 ಮಂದಿ ಅಪರಾಧಿಗಳಿಗೆ ವಿಶೇಷ ನಿಯೋಜಿತ ನ್ಯಾಯಾಲಯ ಮರಣದಂಡನೆ ಹಾಗೂ 11 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.
ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆ ನಡೆಸಿದ್ದ ವಿಶೇಷ ನಿಯೋಜಿತ ನ್ಯಾಯಾಧೀಶ ಅಂಬಾಲಾಲ್ ಆರ್.ಪಟೇಲ್ ಅವರು ಫೆಬ್ರುವರಿ 8ರಂದು 49 ಮಂದಿಯನ್ನು ತಪ್ಪಿತಸ್ಥರೆಂದು ಘೋಷಿಸಿದ್ದರು. ಸಾಕ್ಷ್ಯಾಧಾರಗಳ ಕೊರತೆಯಿಂದ 28 ಮಂದಿಯನ್ನು ಖುಲಾಸೆಗೊಳಿಸಿದ್ದರು.
2008ರ ಜುಲೈ 26ರಂದು ಅಹಮದಾಬಾದ್ನಲ್ಲಿ ಸಂಭವಿಸಿದ ಸರಣಿ ಬಾಂಬ್ ಸ್ಫೋಟದಲ್ಲಿ 56 ಜನರು ಮೃತಪಟ್ಟಿದ್ದರು. ಸುಮಾರು 200 ಮಂದಿ ಗಾಯಗೊಂಡಿದ್ದರು.