ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮಂಗಳೂರು(Mangalore): ನಗರದ ಗರೋಡಿಯಲ್ಲಿ ರಿಕ್ಷಾದಲ್ಲಿ ಕುಕ್ಕರ್ ಸ್ಪೋಟಗೊಂಡ ಸ್ಥಳಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಭೇಟಿ ನೀಡಿ ಪರಿಶೀಲಿನೆ ನಡೆಸಿದರು.
ಸ್ಫೋಟದ ಬಗ್ಗೆ ಹಾಗೂ ನಂತರದ ತನಿಖೆಯ ಬೆಳವಣಿಗೆಗಳ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರೇಟ್’ನ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸ್ಫೋಟದಿಂದ ಗಾಯಗೊಂಡಿರುವ ಆರೋಪಿ ಮಹಮ್ಮದ್ ಶಾರಿಕ್ ಹಾಗೂ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಅವರು ನಗರದ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರನ್ನು ಕೂಡ ಗೃಹ ಸಚಿವರು ಭೇಟಿಯಾದರು.
ಈ ಭಯೋತ್ಪಾದನಾ ಕೃತ್ಯದ ಬಗ್ಗೆ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳ ಜೊತೆ ಗೃಹ ಸಚಿವರು ಸಭೆ ನಡೆಸಲಿದ್ದಾರೆ.
ಡಿಜಿಪಿ ಮತ್ತು ಐಜಿಪಿ ಪ್ರವೀಣ್ ಸೂದ್, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರವಿಕುಮಾರ್ ಎಂ ಆರ್. ಮಂಗಳೂರು ನಗರ ಪೊಲೀಸ್ ಕಮಿಷನರ್ ಎನ್. ಶಶಿಕುಮಾರ್, ಪಶ್ಚಿಮ ವಲಯ ಐಜಿಪಿ ಚಂದ್ರಗುಪ್ತ, ಡಿಸಿಪಿ ಅಂಶು ಕುಮಾರ್ ಜೊತೆಯಲ್ಲಿದ್ದರು.
ಆರಗ ಜ್ಞಾನೇಂದ್ರ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿದಾಗ ಸ್ಥಳೀಯ ವಿಶ್ವ ಹಿಂದೂ ಪರಿಷತ್ ಮುಖಂಡರಾದ ಜಗದೀಶ್ ಶೇಣವ ಹಾಗೂ ಇತರರು ಕೇಸರಿ ಶಾಲನ್ನು ತೋಡಿಸಿ ಗೃಹ ಸಚಿವರನ್ನು ಬರಮಾಡಿಕೊಂಡರು.
ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ.ವೈ ಭರತ್ ಶೆಟ್ಟಿ ಅವರು ಗೃಹ ಸಚಿವರ ಜೊತೆಗಿದ್ದರು.