ಮನೆ ರಾಜಕೀಯ ಬಿಜೆಪಿಯಲ್ಲಿ ಭಿನ್ನಮತವಿಲ್ಲ: ಸಿಎಂ ಬೊಮ್ಮಾಯಿ

ಬಿಜೆಪಿಯಲ್ಲಿ ಭಿನ್ನಮತವಿಲ್ಲ: ಸಿಎಂ ಬೊಮ್ಮಾಯಿ

0

ಚಿತ್ರದುರ್ಗ(Chiitradurga): ಬಿಜೆಪಿಯಲ್ಲಿ ಭಿನ್ನಮತವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಮುರುಘಾ ಮಠದ ಆವರಣದ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ ಮಂಡಿ ಶಸ್ತ್ರಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಾಗಾಗಿ ಕಾರ್ಯಕ್ರಮಗಳಿಗೆ ಅವರು ಹಾಜರಾಗುತ್ತಿಲ್ಲ. ಬಿಜೆಪಿಯಲ್ಲಿ ಯಾವೂದೇ ಭಿನ್ನಮತವಿಲ್ಲ ಎಂದು ಹೇಳಿದರು.

ಮುರುಘಾ ಮಠದ ಆಡಳಿತಾತ್ಮಕ ಕಾರ್ಯವೈಖರಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ನೀಡಿದ ವರದಿ ಕಾನೂನು ಇಲಾಖೆಯಲ್ಲಿದ್ದು, ಸರ್ಕಾರ ಶೀಘ್ರ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದರು.

ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪಿತೂರಿ ನಡೆದಿದೆ ಎನ್ನಲಾದ ಪ್ರಕರಣವನ್ನು ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಈ ಹಂತದಲ್ಲಿ ಪ್ರತಿಕ್ರಿಯೆ ನೀಡುವುದಿಲ್ಲ ಎಂದರು.

ಜೆಡಿಎಸ್’ಗೆ ಬಹುಮತ ಸಿಕ್ಕರೆ ಅಲ್ಪಸಂಖ್ಯಾತರನ್ನು ಮುಖ್ಯಮಂತ್ರಿ ಹಾಗೂ ದಲಿತರನ್ನು ಉಪ ಮುಖ್ಯಮಂತ್ರಿ ಮಾಡುವುದಾಗಿ ಎಚ್.ಡಿ.ಕುಮಾರಸ್ವಾಮಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅದು ಜೆಡಿಎಸ್ ನಿರ್ಣಯ. ಈ ಬಗ್ಗೆ ಮಾತನಾಡುವುದಿಲ್ಲ ಎಂದರು.