ಮನೆ ಮನರಂಜನೆ ಶಿವರಾಜ್ ಕುಮಾರ್ ಅಭಿನಯದ `ಘೋಸ್ಟ್’ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯ

ಶಿವರಾಜ್ ಕುಮಾರ್ ಅಭಿನಯದ `ಘೋಸ್ಟ್’ ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯ

0

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್‌ ಅಭಿನಯಿಸುತ್ತಿರುವ ಶ್ರೀನಿ ನಿರ್ದೇಶನದ ‘ಘೋಸ್ಟ್‌’ ಚಿತ್ರದ ಮೊದಲ ಹಂತದ ಚಿತ್ರೀಕರಣದ ಮುಗಿದಿದೆ.

ಬೆಂಗಳೂರಿನ ಮಿನರ್ವ ಮಿಲ್‌’ನಲ್ಲಿ ಅದ್ದೂರಿಯಾಗಿ ನಿರ್ಮಿಸಲಾಗಿರುವ ಹದಿನೈದಕ್ಕೂ ಅಧಿಕ ಸೆಟ್‌ಗಳಲ್ಲಿ 28 ದಿನಗಳ ಕಾಲ ಚಿತ್ರೀಕರಣ ನಡೆದಿದೆ.

ಶಿವರಾಜ್ ಕುಮಾರ್, ಜಯರಾಮ್, ಸತ್ಯಪ್ರಕಾಶ್, ಪ್ರಶಾಂತ್ ನಾರಾಯಣನ್ ಮುಂತಾದ ಕಲಾವಿದರು ಈ ಹಂತದ ಚಿತ್ರೀಕರಣದಲ್ಲಿ ಭಾಗವಹಿಸಿದ್ದರು.

ಮೋಹನ್ ಬಿ. ಕೆರೆ ಈ ಚಿತ್ರದ ಕಲಾ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ದ್ವಿತೀಯ ಹಂತದ ಚಿತ್ರೀಕರಣ ಡಿಸೆಂಬರ್ ನಲ್ಲಿ ಮೈಸೂರಿನಲ್ಲಿ ಆರಂಭವಾಗಲಿದೆ.

ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರವನ್ನು ಸಂದೇಶ್ ನಾಗರಾಜ್ ಅರ್ಪಿಸುತ್ತಿದ್ದಾರೆ.

ನಿರ್ದೇಶಕ ಶ್ರೀನಿ ಅವರೇ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಸಂಭಾಷಣೆ ಮಾಸ್ತಿ ಹಾಗೂ ಪ್ರಸನ್ನ ಅವರದು. ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಹಾಗೂ ಮಹೇಂದ್ರ ಸಿಂಹ ಛಾಯಾಗ್ರಹಣ ಈ ಚಿತ್ರಕ್ಕಿದೆ.