ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ನವದೆಹಲಿ: ವಿದ್ಯುತ್ ದರ ನಿಗದಿ ಕುರಿತ ಷರತ್ತುಗಳಿಗೆ ಸಂಬಂಧಿಸಿದಂತೆ ಮೂರು ತಿಂಗಳೊಳಗೆ ನಿರ್ದಿಷ್ಟ ನಿಯಮಾವಳಿಗಳನ್ನು ರೂಪಿಸುವಂತೆ ಸುಪ್ರೀಂ ಕೋರ್ಟ್ ಬುಧವಾರ ಎಲ್ಲಾ ರಾಜ್ಯಗಳ ವಿದ್ಯುತ್ ನಿಯಂತ್ರಣ ಆಯೋಗಗಳಿಗೆ ನಿರ್ದೇಶಿಸಿದೆ.
ಮಹಾರಾಷ್ಟ್ರ ರಾಜ್ಯ ವಿದ್ಯುತ್ ನಿಯಂತ್ರಣ ಆಯೋಗವು (ಎಂಇಆರ್’ಸಿ) ಅದಾನಿ ಎಲೆಕ್ಟ್ರಿಸಿಟಿ ಮುಂಬೈ ಇನ್ಫ್ರಾ ಲಿಮಿಟೆಡ್ಗೆ (ಎಇಎಂಐಎಲ್) ವಿದ್ಯುತ್ ಪ್ರಸರಣ ಪರವಾನಗಿ ಮಂಜೂರು ಮಾಡಿತ್ತು. ಇದನ್ನು ಪ್ರಶ್ನಿಸಿ ಟಾಟಾ ಪವರ್ ಕಂಪನಿ ಲಿಮಿಟೆಡ್ ಟ್ರಾನ್ಸ್ಮಿಷನ್ (ಟಿಪಿಸಿ–ಟಿ) ವಿದ್ಯುತ್ ಮೇಲ್ಮನವಿ ನ್ಯಾಯಮಂಡಳಿಗೆ (ಎಪಿಟಿಇಎಲ್) ಅರ್ಜಿ ಸಲ್ಲಿಸಿತ್ತು. ಅದನ್ನು ಎಪಿಟಿಇಎಲ್ ವಜಾಗೊಳಿಸಿತ್ತು.
ಇದನ್ನು ಪ್ರಶ್ನಿಸಿ ಟಾಟಾ ಪವರ್ ಕಂಪನಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಬುಧವಾರ ಇದರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು ಜೆ.ಬಿ.ಪಾರ್ದಿವಾಲಾ ಅವರನ್ನೊಳಗೊಂಡ ತ್ರಿಸದಸ್ಯ ನ್ಯಾಯಪೀಠವು ಎಇಎಂಐಎಲ್ ತೀರ್ಪನ್ನು ಎತ್ತಿಹಿಡಿಯಿತು. ಟಾಟಾ ಕಂಪನಿಯ ಮೇಲ್ಮನವಿ ವಜಾಗೊಳಿಸಿತು.
ನ್ಯಾಯಾಲಯವು ತೀರ್ಪು ಪ್ರಕಟಿಸಿದ ದಿನದಿಂದ (ಬುಧವಾರ) ಮೂರು ತಿಂಗಳೊಳಗೆ ವಿದ್ಯುತ್ ಕಾಯ್ದೆಯ ಸೆಕ್ಷನ್ 181ರ ಅಡಿಯಲ್ಲಿ ನಿಗದಿತ ನಿಯಮಾವಳಿಗಳನ್ನು ರೂಪಿಸುವಂತೆ ಎಲ್ಲಾ ವಿದ್ಯುತ್ ನಿಯಂತ್ರಣ ಆಯೋಗಗಳಿಗೆ ನಾವು ನಿರ್ದೇಶಿಸುತ್ತಿದ್ದೇವೆ ಎಂದು ನ್ಯಾಯಪೀಠ ಹೇಳಿತು.