ಮನೆ ಕಾನೂನು ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ

ಸಚಿವ ಡಾ.ಕೆ.ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ

0

ಚಿಕ್ಕಬಳ್ಳಾಪುರ: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರಿಗೆ ಸಮನ್ಸ್ ನೀಡಿರುವ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕ್ರಿಮಿನಲ್ ಪ್ರಕರಣ ದಾಖಲಿಸಲು ಆದೇಶಿಸಿದೆ.

ಶಾಶ್ವತ ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ಆರ್.ಆಂಜನೇಯ ರೆಡ್ಡಿ ಅವರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಆದೇಶ ನೀಡಲಾಗಿದೆ.

ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾಗಿ ಸುಧಾಕರ್ ಅವರನ್ನು ನೇಮಿಸಲಾಗಿತ್ತು. ಇವರ ಅರ್ಹತೆ ಮತ್ತು ಮಾನದಂಡ ಪ್ರಶ್ನಿಸಿ ಆಂಜನೇಯ ರೆಡ್ಡಿ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ರೈತರಿಗೆ ಕಳ್ಳಬಟ್ಟಿ ಕುಡಿಸಿ ಜೈಲು ಸೇರಿದ್ದ ವ್ಯಕ್ತಿ ನನ್ನ ವಿರುದ್ಧ ಹೋರಾಟ ಮಾಡುತ್ತಿದ್ದಾರೆ ಎಂದು‌ ಅಂದು ಶಾಸಕರಾಗಿದ್ದ ಸುಧಾಕರ್ ಆರೋಪಿಸಿದ್ದರು.

ಇದು ನಮ್ಮ ತೇಜೋವಧೆ ಎಂದು ಈ ಹೇಳಿಕೆ ವಿರುದ್ಧ ಆಂಜನೇಯ ರೆಡ್ಡಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಮಾನನಷ್ಟ ಪ್ರಕರಣವನ್ನು ಕ್ರಿಮಿನಲ್ ಪ್ರಕರಣ ಎಂದು ಪರಿಗಣಿಸಬಹುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಈ ಆಧಾರದಲ್ಲಿ ಆಂಜನೇಯ ರೆಡ್ಡಿ, ಸುಧಾಕರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.