ಮನೆ ಉದ್ಯೋಗ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

0

ಭಾರತೀಯ ವಿಜ್ಞಾನ ಸಂಸ್ಥೆ ಬೆಂಗಳೂರು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಒಟ್ಟು 7 ಪ್ರಾಜೆಕ್ಟ್ ಅಸೋಸಿಯೇಟ್ I ಹುದ್ದೆಗಳು ಖಾಲಿ ಇದ್ದು ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಬೆಂಗಳೂರಿನಲ್ಲಿ ಉದ್ಯೋಗ ಮಾಡಲು ಬಯಸುವವರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಡಿಸೆಂಬರ್ 5, 2022 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು, ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಿ.

ಶೈಕ್ಷಣಿಕ ಅರ್ಹತೆ ಏನಿರಬೇಕು?

ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂಎಸ್ಸಿ ಪೂರ್ಣಗೊಳಿಸಿರಬೇಕು.

ಅಭ್ಯರ್ಥಿಗಳ ವಯಸ್ಸು ಎಷ್ಟಿರಬೇಕು?

ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಡಿಸೆಂಬರ್ 5, 2022ಕ್ಕೆ ಗರಿಷ್ಠ 35 ವರ್ಷ ಮೀರಿರಬಾರದು.

ಅರ್ಜಿ ಶುಲ್ಕ:

ಶುಲ್ಕ ವಿನಾಯಿತಿ ನೀಡಲಾಗಿದೆ.

ಮೊದಲಿಗೆ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನೀಡಲಾಗುತ್ತೆ. ಬಳಿಕ ಅದರಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಲಾಗುತ್ತದೆ.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 22/11/2022

ಅರ್ಜಿ ಸಲ್ಲಿಸಲು ಕೊನೆ ದಿನ: 05/12/2022