ಮನೆ ರಾಜಕೀಯ ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಯಾರೇ ಆದರೂ ಒಬ್ಬರಿಗೆ ಒಂದೇ ಟಿಕೆಟ್: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

0

ಬೆಂಗಳೂರು(Bengaluru): ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಲ್ಲಿ ಒಬ್ಬರಿಗೆ ಒಂದೇ ಟಿಕೆಟ್‌ ನೀತಿಯನ್ನು ಅನುಸರಿಸಲಾಗುತ್ತಿದೆ. ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಮಾತನಾಡಿದ ಅವರು, ಇದು ನಮ್ಮ ಪಕ್ಷದಲ್ಲಿ ಹೊಸತಲ್ಲ. ಈ ಹಿಂದೆಯೂ ಪಕ್ಷಕ್ಕೆ ದೇಣಿಗೆ ನೀಡಿದ್ದಾರೆ. ಆಗ ಹೆಚ್ಚು ಸುದ್ದಿ ಆಗಿರಲಿಲ್ಲ. ಆದರೆ ಈ ಬಾರಿ ಆಗಿದೆ. ಚುನಾವಣಾ ತಯಾರಿ, ಜಿಲ್ಲೆ ಹಾಗೂ ಬ್ಲಾಕ್ ಮಟ್ಟದಲ್ಲಿ ಕಾಂಗ್ರೆಸ್ ಕಚೇರಿ ನಿರ್ಮಾಣ ಸೇರಿದಂತೆ ಹಲವು ವಿಚಾರವಾಗಿ ಆರ್ಥಿಕ ಶಕ್ತಿ ಅಗತ್ಯವಿದೆ. ಕಚೇರಿ ನಿರ್ಮಾಣಕ್ಕೆ ಕಾರ್ಯಕರ್ತರು ಆರ್ಥಿಕ ನೆರವು ಕೇಳಿದಾಗ ನಾವು ಹಣ ಸಹಾಯ ಮಾಡುತ್ತೇವೆ. ಕಾರ್ಯಕರ್ತರಿಗೆ ತೊಂದರೆ ಆದಾಗ ಅವರಿಗೆ ಸಹಾಯ ಮಾಡಲು ಹಣದ ಅಗತ್ಯವಿದೆ. ಹೀಗಾಗಿ ದೇಣಿಗೆಯನ್ನು ಸಂಗ್ರಹಿಸಲಾಗಿದೆ ಎಂದರು.

ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು. ಇಲ್ಲಿ ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ. ಪಕ್ಷ ಮೊದಲು ಅಧಿಕಾರಕ್ಕೆ ಬರಬೇಕು. ಅಧಿಕಾರಕ್ಕೆ ಬಂದಾಗ ಎಲ್ಲರಿಗೂ ಅಧಿಕಾರ ಸಿಗುತ್ತದೆ. ಎಲ್ಲರಿಗೂ ಅವರದೇ ಆದ ಶಕ್ತಿ ಇರುತ್ತದೆ. ಯಾರ ಶಕ್ತಿ ಎಷ್ಟಿದೆ ಎಂದು ಹೇಳಲು ಸಾಧ್ಯವಿಲ್ಲ. ಒಬ್ಬರಿಗೆ 100 ಬೂತ್ ನಿಭಾಯಿಸುವ ಶಕ್ತಿ ಇದ್ದರೆ, ಮತ್ತೆ ಕೆಲವರಿಗೆ 50, ಇನ್ನೂ ಕೆಲವರಿಗೆ 10 ಬೂತ್ ನಿಭಾಯಿಸುವ ಶಕ್ತಿ ಇರುತ್ತದೆ ಎಂದು ಹೇಳಿದರು.