Saval TV on YouTube
ಬೆಂಗಳೂರು: ಮಂಗಳೂರಿನಲ್ಲಿ ನಡೆದ ಕುಕ್ಕರ್ ಸ್ಪೋಟದ ಮುಂದಿನ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆ(ಎನ್ಐಎ)ಗೆ ವರ್ಗಾಯಿಸಿ ಕೇಂದ್ರ ಗೃಹ ಇಲಾಖೆಯು ಆಜ್ಞೆ ಹೊರಡಿಸಿದೆ.
ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ, ಪ್ರಾಥಮಿಕ ತನಿಖೆಯಲ್ಲಿ, ಸಂಗ್ರಹಿಸಲಾದ, ಸಾಕ್ಷ್ಯ ಹಾಗೂ ಇತರ ಮಾಹಿತಿಗಳ ಆಧಾರದ ಮೇಲೆ, ರಾಜ್ಯ ಸರಕಾರ ಈ ನಿರ್ಧಾರ ಕೈಗೊಂಡು, ಕೇಂದ್ರ ತನಿಖಾ ಸಂಸ್ಥೆ ಎನ್ ಐಎಗೆ ವಹಿಸಲು ಶಿಫಾರಸು ಮಾಡಲಾಗಿತ್ತು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಮಂಗಳೂರಿನ ಕಂಕನಾಡಿ ಸಮೀಪದ ನಾಗುರಿಯಲ್ಲಿ ಕೆಲ ದಿನಗಳ ಹಿಂದೆ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟವಾಗಿತ್ತು. ಆರೋಪಿ ಶಾರೀಕ್ ಘಟನೆಯಲ್ಲಿ ಗಾಯಗೊಂಡು ಸಿಕ್ಕಿಬಿದ್ದಿದ್ದಾನೆ. ಅಲ್ಲದೆ ಸ್ಪೋಟದ ಹೊಣೆಯನ್ನು ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಎಂಬ ಉಗ್ರಗಾಮಿ ಸಂಘಟನೆ ಹೊತ್ತುಕೊಂಡಿದೆ ಎಂದು ವರದಿಯಾಗಿದೆ.