ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅರೆಕಾಲಿಕ ಅತಿಥಿ ಉಪನ್ಯಾಸಕರ ಭರ್ತಿ
ಈರುಳ್ಳಿ ಮೇಲಿರುವ ಕಪ್ಪು ಚುಕ್ಕೆ ತರುತ್ತೆ ಆಪತ್ತು ಆರೋಗ್ಯಕ್ಕೆ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮಂಗಳೂರು: ಹಿಂದೂ ಯುವತಿಯ ಜೊತೆಗೆ ಪ್ರಯಣಿಸುತ್ತಿದ್ದ ಮುಸ್ಲಿಂ ಯುವಕನಿಗೆ ಸಂಘಪರಿವಾರದ ಸಂಘಟನೆಯ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ನಗರದ ನಂತೂರು ಜಂಕ್ಷನ್ ಬಳಿ ಗುರುವಾರ ನಡೆದಿದೆ.
ಹಲ್ಲೆಗೊಳಗಾದ ಯುವಕನನ್ನು ಕಾರ್ಕಳ ತಾಲ್ಲೂಕಿನ ಖಾಸಗಿ ಕಾಲೇಜೊಂದರ ವಿದ್ಯಾರ್ಥಿ ಸೈಯದ್ ರಶೀಮ್ ಉಮರ್ (20) ಎಂದು ಗುರುತಿಸಲಾಗಿದೆ.
ಈ ಬಗ್ಗೆ ಕದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾರ್ಕಳ-ನಿಟ್ಟೆ ಮಾರ್ಗವಾಗಿ ಮಂಗಳೂರಿಗೆ ಬರುತ್ತಿದ್ದ ಬಸ್ಸಿನಲ್ಲಿ ರಶೀಮ್ ಅವರು ಯುವತಿಯೊಬ್ಬರ ಜೊತೆ ಪ್ರಯಾಣಿಸುತ್ತಿದ್ದರು.
ಬಸ್ ನಂತೂರು ಜಂಕ್ಷನ್ ತಲುಪಿದಾಗ ನಾಲ್ಕೈದು ಯುವಕರು ಬಸ್ಸಿನೊಳಗೆ ನುಗ್ಗಿ ಏಕಾಏಕಿಯಾಗಿ ಅವಾಚ್ಯ ಶಬ್ದಗಳಿಂದ ಬೈದರು. ಬಸ್‌ನಿಂದ ಕೆಳಗೆ ಇಳಿಸಿ ದೊಣ್ಣೆ ಮತ್ತು ಬೆತ್ತದಿಂದ ಹಲ್ಲೆ ನಡೆಸಿದರು. ಈ ವಿಷಯವನ್ನು ಯಾರಿಗಾದರೂ ಹೇಳಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಜೀವ ಬೆದರಿಕೆ ಹಾಕಿದರು ಎಂದು ಸೈಯದ್ ರಶೀಮ್ ಉಮರ್ ದೂರಿನಲ್ಲಿ ತಿಳಿಸಿದ್ದಾರೆ.
ಈ ಘಟನೆ ಕುರಿತ ಟ್ವೀಟ್ ಒಂದಕ್ಕೆ ಪ್ರತಿಕ್ರಿಯಿಸಿರುವ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್, ಈ ಘಟನೆಗೆ ಸಂಬಂಧಿಸಿ ಕ್ರಮಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.