ಗ್ರಂಥಾಲಯ ಕಂ ಸಹಾಯಕ ಹುದ್ದೆಗೆ ಅರ್ಜಿ….
ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಕರ್ತವ್ಯಲೋಪ ಎಸಗಿದ ಆರೋಪದ ಮೇಲೆ ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಶ್ರೀನಿವಾಸ್ ಮತ್ತು ಬಿಬಿಎಂಪಿ ವಿಶೇಷ ಆಯುಕ್ತ ಎಸ್. ರಂಗಪ್ಪ ಅವರನ್ನು ಅಮಾನತುಗೊಳಿಸಲಾಗಿದೆ.
ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶನಿವಾರ ಆದೇಶ ಹೊರಡಿಸಿದೆ.
ಚಿಲುಮೆ ಸಂಸ್ಥೆಯು ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಮತದಾರರ ಮಾಹಿತಿ ಕಳವು ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗ ಶುಕ್ರವಾರ ಹಲವು ಕ್ರಮಗಳನ್ನು ಕೈಗೊಂಡಿತ್ತು.
ಮಹದೇವಪುರ ವಿಧಾನಸಭಾ ಕ್ಷೇತ್ರದ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದ ಕೆ. ಶ್ರೀನಿವಾಸ್ ಹಾಗೂ ಶಿವಾಜಿನಗರ ಮತ್ತು ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರಗಳ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಯಾಗಿದ್ದ ಎಸ್. ರಂಗಪ್ಪ ಅವರನ್ನು ಸೇವೆಯಿಂದ ಅಮಾನತು ಮಾಡಿ, ಇಲಾಖಾ ವಿಚಾರಣೆ ನಡೆಸುವಂತೆ ಆಯೋಗವು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಿರ್ದೇಶನ ನೀಡಿತ್ತು.ಇಬ್ಬರೂ ಐಎಎಸ್ ಅಧಿಕಾರಿಗಳನ್ನು ಇಲಾಖಾ ವಿಚಾರಣೆ ಕಾಯ್ದಿರಿಸಿ, ಸೇವೆಯಿಂದ ಅಮಾನತುಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಶನಿವಾರ ಆದೇಶ ಹೊರಡಿಸಿದೆ. ಅಮಾನತಿನ ಅವಧಿಯಲ್ಲಿ ಲಿಖಿತ ಅನುಮತಿ ಇಲ್ಲದೆ ಕೇಂದ್ರಸ್ಥಾನ ತೊರೆಯದಂತೆ ಇಬ್ಬರಿಗೂ ನಿರ್ಬಂಧ ವಿಧಿಸಲಾಗಿದೆ.
ಶಿವಾಜಿನಗರ, ಚಿಕ್ಕಪೇಟೆ ಮತ್ತು ಮಹದೇವಪುರ ವಿಧಾನಸಭಾ ಕ್ಷೇತ್ರಗಳಲ್ಲಿ ಖಾಸಗಿ ವ್ಯಕ್ತಿಗಳಿಗೆ ಮತಗಟ್ಟೆ ಹಂತದ ಅಧಿಕಾರಿಗಳು (ಬಿಎಲ್‌ಒ/ಬಿಎಲ್‌ಸಿ) ಎಂದು ಗುರುತಿನ ಚೀಟಿ ವಿತರಿಸಿರುವುದು ಪೊಲೀಸ್ ತನಿಖೆಯಲ್ಲಿ ಪತ್ತೆಯಾಗಿದೆ.
ಈ ಮೂರೂ ಕ್ಷೇತ್ರಗಳಲ್ಲಿ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ನಡೆದಿರುವ ಎಲ್ಲ ಪ್ರಕ್ರಿಯೆಗಳನ್ನು ಸಮಗ್ರವಾಗಿ ಪರಿಶೀಲನೆ ನಡೆಸುವಂತೆ ಆಯೋಗ ಶುಕ್ರವಾರ ಆದೇಶ ಹೊರಡಿಸಿತ್ತು. ಲೋಪ ತಡೆಯುವಲ್ಲಿ ವಿಫಲರಾದ ಆರೋಪದ ಮೇಲೆ ಇಬ್ಬರೂ ಹೆಚ್ಚುವರಿ ಜಿಲ್ಲಾ ಚುನಾವಣಾಧಿಕಾರಿಗಳನ್ನು ಅಮಾನತು ಮಾಡುವಂತೆ ಸೂಚಿಸಿತ್ತು.