ಮನೆ ಸುದ್ದಿ ಜಾಲ ಮಂಗಳೂರು: ಪಾರ್ಕ್ ಮಾಡಿದ್ದ ಕಾರಿನಲ್ಲಿ ಬೆಂಕಿ- ಕೆಲಕಾಲ ಆತಂಕ

ಮಂಗಳೂರು: ಪಾರ್ಕ್ ಮಾಡಿದ್ದ ಕಾರಿನಲ್ಲಿ ಬೆಂಕಿ- ಕೆಲಕಾಲ ಆತಂಕ

0

ಮಂಗಳೂರು: ಪಾರ್ಕ್ ಮಾಡಲಾಗಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಜನರಲ್ಲಿ ಕೆಲ ಕಾಲ ಆತಂಕ ಮೂಡಿಸಿದ ಘಟನೆ ನಗರದ ಬಲ್ಮಠದ ಜ್ಯೂಸ್ ಜಂಕ್ಷನ್ ಬಳಿ ಶನಿವಾರ ನಡೆದಿದೆ.

ವಾಹನ ದಟ್ಟಣೆಯ ಸಮಯದಲ್ಲಿ ಫೋರ್ಡ್ ಕಾರಿನ ಎಂಜಿನ್ ವಿಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಯಾವುದೇ ಗಾಯಗಳಾದ ಬಗ್ಗೆ ವರದಿಯಾಗಿಲ್ಲ. ಆದರೆ, ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಕಾಣಿಸಿಕೊಂಡಿದೆ.

ಬೆಂಕಿಯನ್ನು ಕೂಡಲೇ ನಂದಿಸಲಾಗಿದೆ. ಕಾರಿಗೆ ಹೆಚ್ಚಿನ ಹಾನಿಯಾಗಿದೆ. ಬೆಂಕಿ ಅವಘಡಕ್ಕೆ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ.