ಮನೆ ಅಪರಾಧ ಜಿಂಕೆ ಬೇಟೆ: ಇಬ್ಬರ ಬಂಧನ, ನಾಲ್ವರು ಪರಾರಿ  

ಜಿಂಕೆ ಬೇಟೆ: ಇಬ್ಬರ ಬಂಧನ, ನಾಲ್ವರು ಪರಾರಿ  

0

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಅರಣ್ಯ ವ್ಯಾಪ್ತಿಯಲ್ಲಿ ಅಕ್ರಮವಾಗಿ ಜಿಂಕೆ ಬೇಟೆಯಾಡಿದ್ದ ಇಬ್ಬರನ್ನು ಮೇಟಿಕುಪ್ಪೆ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದು, ನಾಲ್ವರು ಆರೋಪಿಗಳು ಪರಾರಿಯಾಗಿದ್ದಾರೆ.

ಅಕ್ರಮ ನಾಡ ಬಂದೂಕಿನ ಸಮೇತ ಜಿಂಕೆಯ ಮೃತದೇಹದ ಜೊತೆಗೆ ಇಬ್ಬರು ಆರೋಪಿಗಳನ್ನು ವಶಕ್ಕೆಪಡೆದಿದ್ದಾರೆ.

ಮೇಟಿಕುಪ್ಪೆ ಅಭಿಷೇಕ್ ಮತ್ತು ಕಲ್ಲಹಟ್ಟಿ ನೆಹರು ನಾಯಕ್ ಬಂಧಿತ ಆರೋಪಿಗಳು.

ಖಚಿತ ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಸಿಬ್ಬಂದಿಗಳು ದಾಳಿ ನಡೆಸಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಕಂಡು‌ ಅರೋಪಿಗಳು ಸ್ಥಳದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ.

ಈ ವೇಳೆ  ಅರಣ್ಯ ಇಲಾಖೆ ಸಿಬ್ಬಂದಿಗಳು ಹಿಂಬಾಲಿಸಿ ಇಬ್ಬರನ್ನು ವಶಕ್ಕೆ ಪಡೆದರು. ಬಂಧಿತರ ವಿರುದ್ದ ವನ್ಯಜೀವಿ ಕಾಯ್ದೆ ಪ್ರಕರಣ ದಾಖಲಾಗಿದ್ದು, ತಲೆ ಮರೆಸಿಕೊಂಡ ಇತರೆ  ಆರೋಪಿಗಳಿಗಾಗಿ ಶೋಧ ಕಾರ್ಯ ಆರಂಭವಾಗಿದೆ.