ಮನೆ ಸುದ್ದಿ ಜಾಲ ಮೈಸೂರಿನಲ್ಲಿ ಬಾಡಿಗೆ ಮನೆ ಪಡೆಯಲು ಹೊಸ ರೂಲ್ಸ್: ಸ್ಥಳೀಯ ಪೊಲೀಸ್ ಠಾಣೆಯಿಂದ ಕ್ಲಿಯರೆನ್ಸ್ ಸರ್ಟಿಫಿಕೆಟ್ ಕಡ್ಡಾಯ

ಮೈಸೂರಿನಲ್ಲಿ ಬಾಡಿಗೆ ಮನೆ ಪಡೆಯಲು ಹೊಸ ರೂಲ್ಸ್: ಸ್ಥಳೀಯ ಪೊಲೀಸ್ ಠಾಣೆಯಿಂದ ಕ್ಲಿಯರೆನ್ಸ್ ಸರ್ಟಿಫಿಕೆಟ್ ಕಡ್ಡಾಯ

0

ಮೈಸೂರು: ಸಾಂಸ್ಕೃತಿಕ ನಗರಿಯಲ್ಲಿ ಬಾಡಿಗೆ ಮನೆ ಪಡೆಯಲು ಮೈಸೂರಲ್ಲಿ ಹೊಸ ನಿಯಮ ಜಾರಿಯಾಗಿದ್ದು, ಸ್ಥಳೀಯ ಪೊಲೀಸ್ ಠಾಣೆಯಿಂದ ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯುವುದು ಕಡ್ಡಾಯವಾಗಿದೆ.

ಮೈಸೂರು ನಗರ ಪೊಲೀಸ್ ಕಮಿಷನರ್ ರಮೇಶ್ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಮನೆ ಮಾಲೀಕರು ಬಾಡಿಗೆ ಕೊಡುವ ಮೊದಲು, ಬಾಡಿಗೆದಾರರಿಂದ ಕ್ಲಿಯರೆನ್ಸ್ ಸರ್ಟಿಫಿಕೇಟ್ ಕಡ್ಡಾಯವಾಗಿ ಪಡೆಯಬೇಕು ಎಂದು ತಿಳಿಸಿದ್ದಾರೆ.

ಮಂಗಳೂರಿನ ಕಂಕನಾಡಿ ಬಳಿ ಆಟೋದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಶಂಕಿತ ಉಗ್ರ ನಕಲಿ ದಾಖಲೆ ನೀಡಿ ಮನೆ ಬಾಡಿಗೆ ಪಡೆದಿದ್ದನು. ಬ್ಲಾಸ್ಟ್’ಗೆ ಮೈಸೂರಲ್ಲಿ ಸಕಲ ತಯಾರಿ ನಡೆಸಿದ್ದನು. ಈ ಹಿನ್ನೆಲೆ ಮೈಸೂರು ನಗರ ಪೊಲೀಸರು ನೂತನ ನಿಯಮ ಜಾರಿಗೆ ತಂದಿದ್ದಾರೆ.

ಕ್ಲಿಯರೆನ್ಸ್ ಸರ್ಟಿಫಿಕೇಟ್’ಗೆ 100 ರೂ.:

100 ರೂ ಪಾವತಿಸಿ ಅರ್ಜಿ ಪಡೆದು ಕ್ಲಿಯರೆನ್ಸ್ ಸರ್ಟಿಫಿಕೇಟ್ ಪಡೆಯಬೇಕು. ಬ್ಯಾಚುಲರ್, ಕುಟುಂಬಗಳಿಗೆ, ಪಿಜಿ ನಡೆಸುವವರಿಗೆ ಪ್ರತ್ಯೇಕ ಅರ್ಜಿ ಹಾಕಬೇಕು. ಈಗಾಗಲೇ ಬಾಡಿಗೆ ಇರುವವರ ಬಗ್ಗೆ ಮಾಹಿತಿ ನೀಡಬೇಕು. ಈ ನಿಯಮವನ್ನು ಎಲ್ಲಾ ಠಾಣೆಗಳು ಕಟ್ಟುನಿಟ್ಟಾಗಿ ನಿಯಮ ಪಾಲಿಸುವಂತೆ ಮೈಸೂರು ನಗರ ಪೊಲೀಸ್ ಕಮಿಷನರ್ ರಮೇಶ್ ಸೂಚನೆ ಹೊರಡಿಸಿದ್ದಾರೆ.