ಮನೆ ಸುದ್ದಿ ಜಾಲ ಕೊರಗಜ್ಜ ಹೆಸರಲ್ಲಿ ದಂಧೆ: ನಿಲ್ಲಿಸದಿದ್ದರೆ ಉಗ್ರ ಹೋರಾಟ- ದೈವಾರಾಧಕರ ಎಚ್ಚರಿಕೆ

ಕೊರಗಜ್ಜ ಹೆಸರಲ್ಲಿ ದಂಧೆ: ನಿಲ್ಲಿಸದಿದ್ದರೆ ಉಗ್ರ ಹೋರಾಟ- ದೈವಾರಾಧಕರ ಎಚ್ಚರಿಕೆ

0

ಮಂಗಳೂರು: ಆದಿ ಸ್ಥಳ ಮತ್ತು ತುಳುನಾಡು ಹೊರತುಪಡಿಸಿ ಕೊರಗಜ್ಜನ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ. ಹೀಗಿದ್ದರೂ ರಾಜ್ಯದ ಕೆಲವೆಡೆ ಕೊರಗಜ್ಜನ ಹೆಸರಲ್ಲಿ ದಂಧೆ ನಡೆಯುತ್ತಿದೆ. ಇದನ್ನು ನಿಲ್ಲಿಸದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಕರಾವಳಿಯ ದೈವಾರಾಧಕರು ಎಚ್ಚರಿಕೆ ನೀಡಿದ್ದಾರೆ

ದೈವದ ಕೋಲಾ ಸೇವೆಯ ಹೆಸರಿನಲ್ಲಿ ಲಕ್ಷಾಂತರ ರೂಪಾಯಿಯನ್ನು ಲೂಟಿ ಮಾಡುತ್ತಿದ್ದಾರೆ ಎಂದು ತುಳುನಾಡ ದೈವಾರಾಧನ ಸಂರಕ್ಷಣಾ ಯುವ ವೇದಿಕೆ, ದೈವಾರಾಧನ ಸಮಿತಿ ಬೆಳ್ತಂಗಡಿ, ಹಿಂದೂ ಸಂರಕ್ಷಣಾ ಸಮಿತಿಗಳು ಆರೋಪಿಸಿವೆ.

ದೈವ ನಿಂದನೆ ಮಾಡಿ ದಂಧೆ ಮಾಡುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿವೆ. ದೈವಾರಾಧನೆ ವಿರುದ್ಧ ಮಂಗಳೂರಿನ ಜನ ಸಿಡಿದೆದ್ದಿದ್ದಾರೆ. ಹಿಂದೂ ಸಂರಕ್ಷಣಾ ಸಮಿತಿ, ಮಂಗಳೂರು ಸಮಸ್ತ ದೈವಾರಾಧಕರಿಂದ ಪ್ರಾರ್ಥನೆ ಸಲ್ಲಿಸಲಾಗಿದೆ.

ಮೈಸೂರು ಮೂಲದ ಕೆಲ ಭಕ್ತರೂ ಆದಿ ಸ್ಥಳದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಆದಿ ಸ್ಥಳ ಮತ್ತು ತುಳುನಾಡು ಹೊರತುಪಡಿಸಿ ಕೊರಗಜ್ಜನ ಪ್ರತಿಷ್ಠಾಪನೆಗೆ ಅವಕಾಶ ಇಲ್ಲ. ಹೀಗಿದ್ದರೂ ರಾಜ್ಯದ ಕೆಲವೆಡೆ ಕೊರಗಜ್ಜನ ಹೆಸರಲ್ಲಿ ದಂಧೆ ನಡೆಯುತ್ತಿದೆ. ಕೊರಗಜ್ಜನ ಆದಿಸ್ಥಳ ಬಿಟ್ಟು ಬೇರೆ ಕಡೆ ಆರಾಧನೆ ಮಾಡುತ್ತಿರೋದು ವ್ಯವಹಾರದ ಉದ್ದೇಶವಾಗಿದೆ. ಇದನ್ನ ನಿಲ್ಲಿಸದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಕರಾವಳಿಯ ದೈವಾರಾಧಕರು ಎಚ್ಚರಿಕೆ ನೀಡಿದ್ದಾರೆ.