ಮನೆ ರಾಜಕೀಯ ಬಿಜೆಪಿ ಸೇರ್ಪಡೆಗೊಂಡ ಸಂಸದೆ ಸುಮಲತಾ ಆಪ್ತ ಇಂಡವಾಳ ಸಚ್ಚಿದಾನಂದ ಮೂರ್ತಿ

ಬಿಜೆಪಿ ಸೇರ್ಪಡೆಗೊಂಡ ಸಂಸದೆ ಸುಮಲತಾ ಆಪ್ತ ಇಂಡವಾಳ ಸಚ್ಚಿದಾನಂದ ಮೂರ್ತಿ

0

ಬೆಂಗಳೂರು: ಸಂಸದೆ ಸುಮಲತಾ ಅಂಬರೀಶ್ ಅವರ ಆಪ್ತ ಇಂಡವಾಳ ಸಚ್ಚಿದಾನಂದ ಮೂರ್ತಿ ಅವರನ್ನು ಬಿಜೆಪಿ  ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿದೆ.

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ಸಚ್ಚಿದಾನಂದ ಅವರನ್ನು ಪಕ್ಷದ ಮುಖಂಡರು ಶಾಲು ಹೊದಿಸಿ ಪಕ್ಷದ ಧ್ವಜ ನೀಡಿ ಬರಮಾಡಿಕೊಂಡರು.

ಸಚಿವರಾದ ನಾರಾಯಣ ಗೌಡ, ಕೆ.ಗೋಪಾಲಯ್ಯ, ಡಾ.ಸಿ.ಎನ್.ಅಶ್ವಥ್ ನಾರಾಯಣ, ಬಿಜೆಪಿ ಉಪಾಧ್ಯಕ್ಷ ನಿರ್ಮಲ್‍ಕುಮಾರ್ ಸುರಾನ, ಶಾಸಕರಾದ ಸತೀಶ್ ರೆಡ್ಡಿ, ರವಿ ಸುಬ್ರಹ್ಮಣ್ಯ, ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್  ಸೇರಿದಂತೆ ಅವರ ಬೆಂಬಲಿಗರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡರು.

ಮುಂಬರುವ 2023ರ ವಿಧಾನಸಭೆ ಚುನಾವಣೆಯಲ್ಲಿ ಸಚ್ಚಿದಾನಂದ ಮೂರ್ತಿ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.