ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆಯು ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಜೂನಿಯರ್ ರಿಸರ್ಚ್ ಫೆಲೋ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಡಿಸೆಂಬರ್ 31, 2022 ಅರ್ಜಿ ಹಾಕಲು ಕೊನೆಯ ದಿನವಾಗಿದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಭ್ಯರ್ಥಿಗಳು ಆಫ್’ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.
ಶೈಕ್ಷಣಿಕ ಅರ್ಹತೆ:
ಡಿಆರ್ಡಿಒ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ ಬಿ.ಟೆಕ್, ಎಂಇ/ ಎಂ.ಟೆಕ್ ಪೂರ್ಣಗೊಳಿಸಿರಬೇಕು.
ವಯೋಮಿತಿ:
ಡಿಆರ್’ಡಿಒ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಯ ವಯಸ್ಸು ಗರಿಷ್ಠ 28 ವರ್ಷ ಮೀರಿರಬಾರದು.
ವಯೋಮಿತಿ ಸಡಿಲಿಕೆ:
ಒಬಿಸಿ ಅಭ್ಯರ್ಥಿಗಳು- 3 ವರ್ಷ
ಎಸ್’ಸಿ/ಎಸ್’ಟಿ ಅಭ್ಯರ್ಥಿಗಳು- 5 ವರ್ಷ
ಆಯ್ಕೆ ಪ್ರಕ್ರಿಯೆ:
ಗೇಟ್ ಸ್ಕೋರ್
ಮೆರಿಟ್ ಲಿಸ್ಟ್
ಸಂದರ್ಶನ
ಅರ್ಜಿ ಸಲ್ಲಿಸುವುದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಡಿಸೆಂಬರ್ 31ರೊಳಗೆ ಕಳುಹಿಸಬೇಕು.
ನಿರ್ದೇಶಕರು
ಡಿಆರ್’ಡಿಓ ಯಂಗ್ ಸೈಂಟಿಸ್ಟ್ ಲ್ಯಾಬ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್
ಡಾ. ರಾಜ ರಾಮಣ್ಣ ಕಾಂಪ್ಲೆಕ್ಸ್
ರಾಜ್ ಭವನ್ ಸರ್ಕಲ್
ಹೈ ಗ್ರೌಂಡ್ಸ್, ಬೆಂಗಳೂರು- 560001
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23/11/2022
ಅರ್ಜಿ ಸಲ್ಲಿಸಲು ಕೊನೆ ದಿನ: 31/ 12/2022
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-2201 7711 ಗೆ ಕರೆ ಮಾಡಬಹುದು.