ಮನೆ ರಾಜ್ಯ ಮೈಸೂರಿನ ಉದ್ಬೂರು ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ: ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ದಲಿತ ಸಂಘಟನೆಗಳ ಒಕ್ಕೂಟ ಮನವಿ

ಮೈಸೂರಿನ ಉದ್ಬೂರು ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ: ಸೂಕ್ತ ಕ್ರಮಕ್ಕೆ ಜಿಲ್ಲಾಧಿಕಾರಿಗಳಿಗೆ ದಲಿತ ಸಂಘಟನೆಗಳ ಒಕ್ಕೂಟ ಮನವಿ

0

ಮೈಸೂರು(Mysuru): ತಾಲ್ಲೂಕಿನ ಉದ್ಬೂರು ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ ಮಾಡುತ್ತಿರುವವರ ವಿರುದ್ಧ ಸೂಕ್ತ ಕ್ರಮ ಜರುಗಿಸುವಂತೆ ದಲಿತ ಸಂಘಟನೆಗಳ ಒಕ್ಕೂಟದಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ.

ಜಯಪುರ ಹೋಬಳಿಯ ಉದ್ಬೂರು ಗ್ರಾಮದಲ್ಲಿ ಅಸ್ಪೃಶ್ಯತಾ ಆಚರಣೆ ಚಾಲ್ತಿಯಲ್ಲಿದ್ದು, ಜಾತೀಯತೆ ತಾಂಡವವಾಡುತ್ತಿದೆ. ಪರಿಶಿಷ್ಟ ಜಾತಿಯ ಜನಾಂಗದವರಿಗೆ ಸಾರ್ವಜನಿಕ ಸ್ಥಳಗಳಾದ ದೇವಸ್ಥಾನ, ಕ್ಷೌರಿಕ ಅಂಗಡಿ, ಹಾಲು ಶೇಖರಣಾ ಕೇಂದ್ರ, ಪಡಿತರ ವಿತರಣಾ ಕೇಂದ್ರ, ಹೋಟೆಲ್ ಗಳಿಗೆ  ಮುಕ್ತ ಅವಕಾಶವನ್ನು ನೀಡುತ್ತಿಲ್ಲ. ಗ್ರಾಮದಲ್ಲಿರುವ ಪುರಾತನ ನಾರಾಯಣಸ್ವಾಮಿ ದೇವಾಲಯವು ಗ್ರಾಮದ ಸಮಸ್ತ ಜನಾಂಗದವರ ಚಂದ ಹಣದಿಂದ ನಿರ್ಮಾಣ ಮಾಡಿರುವ ದೇವಸ್ಥಾನವಾಗಿದ್ದು, ಪ್ರತಿ ಸಂಕ್ರಾಂತಿಯಂದು ದೊಡ್ಡಜಾತ್ರೆ ನಡೆಯಲಿದೆ. ಜಾತ್ರೆ ಸಮಯದಲ್ಲಿ ದೇವಸ್ಥಾನದ ಅರ್ಚಕ ಅರಸು ಸಮುದಾಯಕ್ಕೆ ಸೇರಿದ ಸೋಮಶೇಖರ ಅರಸು ಅವರು ದೇವಸ್ಥಾನಕ್ಕೆ ಭೇಟಿ ನೀಡುವ ಪರಿಶಿಷ್ಟರನ್ನು ರಸ್ತೆಯ ಬದಿಯಲ್ಲಿಯೇ ನಿಲ್ಲಿಸಿ ಅವರ ಪೂಜಾ ಸಾಮಾಗ್ರಿಗಳ್ನು ಮುಟ್ಟಿಸಿಕೊಳ್ಳದೇ ನಿಕೃಷ್ಣವಾಗಿ ನಡೆಸಿಕೊಳ್ಳುತ್ತಿದ್ದಾರೆ ಹಾಗೂ ಜಾತಿ ಹೆಸರಿನಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದಾರೆ.

ಈ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಗೆ 2018 ಜನವರಿ 11ರಲ್ಲಿಯೇ  ಮನವಿ ಸಲ್ಲಿಸಲಾಗಿತ್ತು. ಆದರೆ ಈ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸಿರುವುದು ಖಂಡನೀಯ.

ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ ಹಾಗೂ ಪೊಲೀಸ್ ಇಲಾಖೆ ಶೀಘ್ರವೇ ಗ್ರಾಮಸ್ಥರ ಸಭೆ ಕರೆದು ಸಾರ್ವಜನಿಕ ಸ್ಥಳಗಳಲ್ಲಿ ಅಸ್ಪೃಶ್ಯತೆ ಆಚರಣೆ ಮಾಡದಂತೆ ಹಾಗೂ ಅಸ್ಪೃಶ್ಯತಾಚಾರಣೆಗೆ ಕುಮ್ಮಕ್ಕು ನೀಡುವವರ ವಿರುದ್ಧ ಹಾಗೂ ದೇವಸ್ಥಾನದ ಅರ್ಚಕ ಸೋಮಶೇಖರ್ ಅರಸು ವಿರುದ್ಧ ಕಾನೂನು ಚೌಕಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒಕ್ಕೂಟ ಆಗ್ರಹಿಸಿದೆ.

ಇಲ್ಲವಾದಲ್ಲಿ ಮುಂದೆ ಜಾತ್ರಾ ಸಮಯದಲ್ಲಿ ಅಥವಾ ಮುಂದಿನ ದಿನಗಳಲ್ಲಿ ನಡೆಯಬಹುದಾದ ಯಾವುದೇ ಅಹಿತಕರ ಘಟನೆಗಳಿಗೆ ಹಾಗೂ ಅಸ್ಪೃಶ್ಯತಾಚರಣೆಗೆ ಸರ್ಕಾರ, ಜಿಲ್ಲಾಡಳಿತ, ಸಮಾಜ ಕಲ್ಯಾಣ ಹಾಗೂ ಪೊಲೀಸ್ ಇಲಾಖೆ ಸಂಪೂರ್ಣ ಜವಬ್ದಾರರಾಗುತ್ತಾರೆ ಎಂದು ಮನವಿಯಲ್ಲಿ ಎಚ್ಚರಿಕೆ ನೀಡಲಾಗಿದೆ.