ಮನೆ ರಾಜಕೀಯ ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ: ನಳಿನ್‍ ಕುಮಾರ್ ಕಟೀಲ್

ಸೈಲೆಂಟ್ ಸುನೀಲ್ ಬಿಜೆಪಿ ಸೇರ್ಪಡೆಗೆ ಅವಕಾಶವಿಲ್ಲ: ನಳಿನ್‍ ಕುಮಾರ್ ಕಟೀಲ್

0

ಬೆಂಗಳೂರು: ಸೈಲೆಂಟ್ ಸುನೀಲ್’ನ್ನು ಯಾವುದೇ ಕಾರಣಕ್ಕೂ ಬಿಜೆಪಿ ಪಕ್ಷಕ್ಕೆ ಸೇರಿಸುವುದಿಲ್ಲ  ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.

ಸೈಲೆಂಟ್ ಸುನೀಲ್ ನಗರದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಪಕ್ಷದ ಕೆಲವು ಪ್ರಮುಖರು ಭಾಗವಹಿಸಿದ ಕುರಿತು ಮಾಹಿತಿ ಪಡೆಯುತ್ತಿದ್ದೇನೆ. ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖಂಡರಿಂದ ವಿವರಣೆ ಕೇಳಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪಕ್ಷದ ಪ್ರಮುಖರು ಮುಂದಿನ ದಿನಗಳಲ್ಲಿ ಇಂಥ ಘಟನೆಗಳು ಆಗದಂತೆ ನೋಡಿಕೊಳ್ಳಬೇಕು. ಎಲ್ಲ ವಿಚಾರಗಳನ್ನು ಪಕ್ಷದ ಗಮನಕ್ಕೆ ತರಬೇಕು ಎಂದು ಅವರು ಸೂಚಿಸಿದ್ದಾರೆ.

ಬಿಜೆಪಿ ವ್ಯಕ್ತಿಗಳ ನಿರ್ಮಾಣದ ಮೂಲಕ ದೇಶ ನಿರ್ಮಾಣದ ಕಾರ್ಯ ಮಾಡುತ್ತಿದೆ. ಉಗ್ರಗಾಮಿಗಳು, ಭಯೋತ್ಪಾದನಾ ಚಟುವಟಿಕೆಗೆ ಬೆಂಬಲ ಕೊಡುವವರು ಮತ್ತು ಅಪರಾಧ ಹಿನ್ನೆಲೆ ಉಳ್ಳವರನ್ನು ಪಕ್ಷ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ನಳಿನ್‍ ಕುಮಾರ್ ಕಟೀಲ್ ಅವರು ತಿಳಿಸಿದ್ದಾರೆ.