ಡೆಂಗ್ಯೂ ಜ್ವರದ ಆತಂಕದಲ್ಲಿ ಮೈಸೂರಿನ ಕೆ ಆರ್ ಒನ್ ಬೆಟ್ಟದಪುರದ ಜನರು!
ಗುಜರಾತ್ ಕರಕುಶಲ ಉತ್ಸವದ ಸದುಪಯೋಗ ಪಡೆದುಕೊಳ್ಳಿ: ಕೆ ಎಂ ಗಾಯಿತ್ರಿ
ನ್ಯಾಯಾಲಯದಲ್ಲಿ ಜವಾನ ಹುದ್ದೆಗಳ ಭರ್ತಿಗೆ ಅಧಿಸೂಚನೆ !
ಮೂಡ ಹಗರಣಕ್ಕೆ ಸಂಬಂಧಿಸಿದ ವ್ಯಕ್ತಿಯ ಅಮಾನತು ಮಾಡುವಂತೆ ಪ್ರತಿಭಟನೆ
ಗುಜರಾತ್ ಹ್ಯಾಂಡಿಕ್ರಾಫ್ಟ್ ಉತ್ಸವ -2024 ಕುರಿತು ಪತ್ರಿಕಾಗೋಷ್ಠಿಯನ್ನು ಏರ್ಪಡಿಸಲಾಯಿತು
T20 ವಿಶ್ವ ಚಾಂಪಿಯನ್ ಟೀಮ್ ಇಂಡಿಯಾವನ್ನು ಭೇಟಿ ಮಾಡಿದ ಪ್ರಧಾನಿ ಮೋದಿ
4,000 ಕೋಟಿ ಬ್ರಹ್ಮಾಂಡ ಭ್ರಷ್ಟಾಚಾರ ಹಗರಣ ವಿರೋಧಿಸಿ ಪ್ರತಿಭಟನೆ
ಗ್ರಾಮ ಪಂಚಾಯಿತಿಗಳಲ್ಲೇ, ಜನನ ಮತ್ತು ಮರಣ, 'ಪ್ರಮಾಣ ಪತ್ರ' ದೊರೆಯುತ್ತದೆ.
ಮಿನಿ ಉದ್ಯೋಗ ಮೇಳ..!
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಬೆಂಗಳೂರು: ಕ್ಷುಲ್ಲಕ ಕಾರಣಕ್ಕಾಗಿ ಪ್ರೇಮಿಗಳಿಬ್ಬರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದ್ದು, ರಾಮಮೂರ್ತಿನಗರ ಪೊಲೀಸರು ಪ್ರಿಯಕರನನ್ನು ಬಂಧಿಸಿದ್ದಾರೆ.
ನೇಪಾಳ ಮೂಲದ ಕೃಷ್ಣಕುಮಾರಿ(23) ಕೊಲೆಯಾದ ಯುವತಿಯಾಗಿದ್ದು, ಸಂತೋಷ್ ದಾಮಿ ಬಂಧಿತ ಆರೋಪಿಯಾಗಿದ್ದಾನೆ.
ಹೊರಮಾವು ಯೂನಿಸೆಕ್ಸ್ ಸ್ಪಾದಲ್ಲಿ ಬ್ಯೂಟಿಷಿಯನ್ ಆಗಿದ್ದ ಕೃಷ್ಣಕುಮಾರಿ ಕೆಲಸ ಮಾಡುತ್ತಿದ್ದರೆ, ಪ್ರಿಯಕರ ಟಿಸಿ ಪಾಳ್ಯದಲ್ಲಿ ಬಾರ್ಬರ್ ಶಾಪ್ನಲ್ಲಿ ಕೆಲಸ ಮಾಡುತ್ತಿದ್ದ. ಇಬ್ಬರಿಗೂ ಮೊದಲು ಪರಿಚಯವಾಗಿ ಪ್ರೇಮಾಂಕುರವಾಗಿತ್ತು. ಒಂದೇ ರೂಂ ಬಾಡಿಗೆ ಪಡೆದು ಲಿವಿಂಗ್ ರಿಲೇಷನ್ಶಿಪ್’ನಲ್ಲಿದ್ದ ಪ್ರೇಮಿಗಳ ಮಧ್ಯೆ ನಿನ್ನೆ ರಾತ್ರಿ ಜಗಳ ನಡೆದಿದೆ. ತಮ್ಮ ಮೇಲೆ ಹಲ್ಲೆ ಮಾಡುತ್ತಿರುವ ಬಗ್ಗೆ ಸ್ನೇಹಿತೆಯರಿಗೆ ವಿಡಿಯೋ ಕಾಲ್ ಮಾಡಿ ತಿಳಿಸಿದ್ದಳು. ಆದರೆ, ಸ್ನೇಹಿತೆಯರು ಮನೆಗೆ ಬರುವಷ್ಟರಲ್ಲಿ ಕೃಷ್ಣಕುಮಾರಿ ಹತ್ಯೆಯಾಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಎರಡು ವರ್ಷದಿಂದಲೂ ಪರಿಚಿತರಾಗಿದ್ದ ಪ್ರೇಮಿಗಳು ಜೀವನ ಸಾಗಿಸಲು ಕೆಲಸ ಮಾಡುತ್ತಿದ್ದರು. ಈ ಮಧ್ಯೆ ಸಂತೋಷ್, ಪ್ರಿಯತಮೆ ಮೇಲೆ ಅನುಮಾನ ವ್ಯಕ್ಯಪಡಿಸಿದ್ದ. ಪರಪುರುಷನೊಂದಿಗೆ ಪ್ರಿಯತಮೆ ಸಂಬಂಧ ಹೊಂದಿದ್ದಾಳೆಂದು ಶಂಕೆ ವ್ಯಕ್ತಪಡಿಸಿ, ನಿನ್ನೆ ರಾತ್ರಿ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಗಲಾಟೆಯಾಗಿದೆ. ಈ ವೇಳೆ ಕುತ್ತಿಗೆ ಹಿಡಿದು ತಲೆಯನ್ನು ಗೋಡೆ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ್ದ. ಹಲ್ಲೆ ಪರಿಣಾಮ ಯುವತಿ ಕುಸಿದುಬಿದ್ದಿದ್ದಳು. ಕೂಡಲೇ ಸಮೀಪದ ಆಸ್ಪತ್ರೆಗೆ ಸೇರಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಕೃಷ್ಣಕುಮಾರಿ ಮೃತಪಟ್ಟಿದ್ದಾಳೆ.
ಸದ್ಯ ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ರಾಮಮೂರ್ತಿನಗರ ಪೊಲೀಸರು ಸಂತೋಷ್ನನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ ಎಂದು ಪೂರ್ವ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದಾರೆ.