Saval TV on YouTube
ಮೈಸೂರು: ಮೈಸೂರಿನಲ್ಲಿ ಅಭಿಮಾನಿಗಳು ಕೇಕ್ ಮೇಲೆ ‘ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ’ ಎಂದು ಬರೆಸಿ ಅಭಿಮಾನ ಮೆರೆದಿದ್ದಾರೆ.
ಮುಂದಿನ ಮುಖ್ಯಮಂತ್ರಿ ಕುರಿತಾಗಿ ಹೇಳಿಕೆ ನೀಡಬಾರದು ಎಂದು ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಸೂಚನೆ ನೀಡದರೂ, ಅಭಿಮಾಮಿಗಳು ಮಾತ್ರ ತಮ್ಮ ಒಲವು ತೋರಿಸುವುದನ್ನು ಮುಂದುವರಿಸಿದ್ದಾರೆ.
ಕರ್ನಾಟಕ ಪ್ರದೇಶ ಕುರುಬರ ಸಂಘ ಮತ್ತು ಮೈಸೂರು ಘಟಕದಿಂದ ಆಯೋಜಿರುವ ಸಂತ ಕನಕದಾಸರ 535ನೇ ಜಯಂತ್ಯೋತ್ಸವ ಹಾಗೂ ಸಮುದಾಯದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಾ ಭಾಗಿಯಾಗಿದ್ದರು.
ಈ ಕಾರ್ಯಕ್ರಮದಲ್ಲಿ ಅಭಿಮಾನಿಗಳು ಬೃಹತ್ ಕೇಕ್ ಸಿದ್ಧಪಡಿಸಿದ್ದು, ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಹುಟ್ಟುಹಬ್ಬದ ಶುಭಾಷಯಗಳು ಎಂದಿದ್ದಾರೆ.