ಮನೆ ರಾಷ್ಟ್ರೀಯ ಗುಜರಾತ್ ಚುನಾವಣೆ: ದಾಖಲೆ ಪ್ರಮಾಣದ  ಮತದಾನ ನಡೆಯಲಿ ಎಂದ ಪ್ರಧಾನಿ ಮೋದಿ

ಗುಜರಾತ್ ಚುನಾವಣೆ: ದಾಖಲೆ ಪ್ರಮಾಣದ  ಮತದಾನ ನಡೆಯಲಿ ಎಂದ ಪ್ರಧಾನಿ ಮೋದಿ

0

ಅಹಮದಾಬಾದ್(Ahmadabad) : ಗುಜರಾತ್ ವಿಧಾನಸಭೆಗೆ ಇಂದು ಮೊದಲ ಹಂತದ ಮತದಾನ ಆರಂಭವಾಗಿದೆ.

ತಮ್ಮ ತವರು ರಾಜ್ಯದ ಚುನಾವಣೆ ಬಗ್ಗೆ ಟ್ವೀಟ್ ಮಾಡಿ ಶುಭಕೋರಿರುವ ಪ್ರಧಾನ ಮಂತ್ರಿ ನರೇಂದ್ರ ಮೋದಿ ದಾಖಲೆ ಪ್ರಮಾಣದಲ್ಲಿ ಮತದಾನ ನಡೆಯಲಿ ಎಂದು ಕರೆ ನೀಡಿದ್ದಾರೆ.

ಇಂದು ಗುಜರಾತ್ ಚುನಾವಣೆಯ ಮೊದಲ ಹಂತದ ಮತದಾನ. ಮತದಾನ ಮಾಡುವ ಎಲ್ಲರಿಗೂ, ವಿಶೇಷವಾಗಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವವರು ದಾಖಲೆ ಪ್ರಮಾಣದಲ್ಲಿ ಮತ ಚಲಾಯಿಸಬೇಕು ಎಂದು ಮನವಿ ಮಾಡಿದ್ದಾರೆ.

ಸೌರಾಷ್ಟ್ರ, ಕಛ್, ದಕ್ಷಿಣ ಭಾಗ ಒಳಗೊಂಡ 19 ಜಿಲ್ಲೆಗಳ 89 ಕ್ಷೇತ್ರಗಳಿಗೆ 14,382 ಮತಗಟ್ಟೆಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ.

70 ಮಹಿಳೆಯರು ಸೇರಿ ಒಟ್ಟಾರೆ 788 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

2017ರ ಚುನಾವಣೆಯಲ್ಲಿ ಈ 89 ಕ್ಷೇತ್ರಗಳ ಪೈಕಿ 48 ಕ್ಷೇತ್ರಗಳನ್ನು ಆಡಳಿತಾರೂಢ ಬಿಜೆಪಿ ಗೆದ್ದುಕೊಂಡಿತ್ತು. 40 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತ್ತು.