ಚಿಕ್ಕಬಳ್ಳಾಪುರ ಜಿಲ್ಲೆಯ ಆರು ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಕೋ ಆರ್ಡಿನೇಟರ್ ಹುದ್ದೆಗಳು
ಹೆಚ್ಎಎಲ್ ಯಲ್ಲಿ ಅಪ್ರೆಂಟಿಸ್ ಹುದ್ದೆ
ಸಿಬ್ಬಂದಿ ನೇಮಕಾತಿ ಆಯೋಗ ಎಸ್ ಎಸ್ ಸಿ ಇಂದ 39,481 ಹುದ್ದೆಗಳ ನೇಮಕಾತಿ
ಚಿಕ್ಕಬಳ್ಳಾಪುರ ಗ್ರಾಮ ಪಂಚಾಯಿತಿಯಲ್ಲಿ ಗ್ರಂಥ ಪಾಲಕರು ಹಾಗೂ ಮೇಲ್ವಿಚಾರಕರ ಹುದ್ದೆಗಳು
ಮಂಗಳೂರಿನ ಸುರತ್ಕಲ್ ನಲ್ಲಿರುವ ಎನ್ ಐ ಟಿ ಕೆ ಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ..
ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಫೆಲೋಶಿಪ್ ಹುದ್ದೆಗಳ ಭರ್ತಿ..
ರಾಮನಗರ ಜಿಲ್ಲೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗಳು..
ವಾಹನ ಚಾಲಕರೇ ಎಚ್ಚರ 130 ಕ್ಕಿಂತ ಹೆಚ್ಚಾದ ವೇಗದಲ್ಲಿ ಚಲಿಸಿದರೆ ಬೀಳುತ್ತೆ FIR
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ತುಮಕೂರು(Tumkur): ಬೆಳಗಾವಿಯ ತಿಲಕವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕನ್ನಡ ಬಾವುಟ ಹಾರಿಸಿದ ವಿದ್ಯಾರ್ಥಿ ಮೇಲೆ ನಡೆದಿರುವ ಹಲ್ಲೆಯನ್ನು ಖಂಡಿಸಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ದೂರು ಕೊಡಲು ಹೋದ ವಿದ್ಯಾರ್ಥಿ ಮೇಲೆ ಪೊಲೀಸರು ಕೂಡ ಅಮಾನುಷವಾಗಿ ಹಲ್ಲೆ ನಡೆಸಿರುವುದು ಕನ್ನಡಕ್ಕೆ, ಕರ್ನಾಟಕಕ್ಕೆ ಬಗೆದ ದೊಡ್ಡ ದ್ರೋಹ ಎಂದು ಕಿಡಿಕಾರಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಹೆಚ್.ಡಿ ಕುಮಾರಸ್ವಾಮಿ, ಡಿಸಿಪಿ ಹಾಗೂ ಎಸಿಪಿ ಮಟ್ಟದ ಅಧಿಕಾರಿಗಳು ಇಬ್ಬರು ಬಾಲಕನ ವಿಷಯದಲ್ಲಿ ಕ್ರೂರವಾಗಿ ವರ್ತಿಸಿ ದರ್ಪ ತೋರಿಸಿರುವುದು ಸರಿಯಲ್ಲ. ಡಿಸಿಪಿ ಅಧಿಕಾರಿ ಆ ಬಾಲಕನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಕಪಾಳಮೋಕ್ಷ ಮಾಡಿ, ಬೂಟು ಕಾಲಿನಿಂದ ಒದ್ದಿರುವುದು ಅಕ್ಷಮ್ಯ ಹಾಗೂ ಅನಾಗರಿಕ ವರ್ತನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಪ್ರಕರಣವನ್ನು ರಾಜ್ಯ ಸರಕಾರ ಗಂಭೀರವಾಗಿ ಪರಿಗಣಿಸಬೇಕು. ತಕ್ಷಣವೇ ಬಾಲಕನ ಮೇಲೆ ಹಲ್ಲೆ ನಡೆಸಿದ ಇತರೆ ಬಾಲಕರನ್ನು ವಶಕ್ಕೆ ಪಡೆದು, ಅವರಿಗೆ ಚಿತಾವಣೆ ನೀಡಿದವರನ್ನು ಬಂಧಿಸಬೇಕು ಹಾಗೂ ಕನ್ನಡ ಬಾವುಟ ಹಾರಿಸಿದ ಬಾಲಕನ ಮೇಲೆ ದುಂಡಾವರ್ತನೆ ತೋರಿದ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯದಲ್ಲಿ ಸರಕಾರ ಬಂದ ಮೇಲೆ ಬೆಳಗಾವಿಯಲ್ಲಿ ಗೊಂದಲ ಹೆಚ್ಚಾಗುತ್ತಿದೆ. ಪ್ರತಿ ಸೂಕ್ಷ್ಮ ವಿಷಯವನ್ನು ರಾಜಕೀಯಕ್ಕೆ ಬಳಸಿಕೊಳ್ಳುವ ಬಿಜೆಪಿಯ ಕೈಯ್ಯಲ್ಲಿ ಕನ್ನಡ ಮತ್ತು ಕನ್ನಡಿಗರು ಸುರಕ್ಷಿತವಾಗಿಲ್ಲ ಎನ್ನುವುದು ಸ್ಪಷ್ಟ. ಬೆಳಗಾವಿ ವಿಷಯ ಗಮನಿಸಿದರೆ ಅದು ಅರ್ಥವಾಗುತ್ತದೆ ಎಂದು ವಾಗ್ದಾಳಿ ನಡೆಸಿದ್ದಾರೆ.