ಮನೆ ರಾಜ್ಯ ಗಡಿ ವಿವಾದ: ರಾಜ್ಯದ ನಿಲುವು ಸಂವಿಧಾನಬದ್ದ- ಸಿಎಂ ಬೊಮ್ಮಾಯಿ

ಗಡಿ ವಿವಾದ: ರಾಜ್ಯದ ನಿಲುವು ಸಂವಿಧಾನಬದ್ದ- ಸಿಎಂ ಬೊಮ್ಮಾಯಿ

0

ಬೆಂಗಳೂರು(Bengaluru): ಸುಪ್ರೀಂಕೋರ್ಟ್’ನಲ್ಲಿ ಗಡಿ ವಿವಾದದ ಪ್ರಕರಣ ವಿಚಾರಣೆಗೆ ಬರಲಿದ್ದು, ರಾಜ್ಯದ ನಿಲುವು ಸಂವಿಧಾನಬದ್ದ ಹಾಗೂ ಕಾನೂನಾತ್ಮಕವಾಗಿದೆ ಎಲ್ಲಾ ಅಂಶಗಳ ಬಗ್ಗೆ ವಕೀಲರು ವಾದ ಮಾಡಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯನವರ ಪುಣ್ಯತಿಥಿಯ ಅಂಗವಾಗಿ ವಿಧಾನ ಸೌಧದ ಆವರಣದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಮಹಾರಾಷ್ಟ್ರದ ಅರ್ಜಿ ಮೈಂಟೆನಬಲ್ ಅಲ್ಲ ಎನ್ನುವುದು ನಮ್ಮ ನಿಲುವು. ಅದನ್ನೇ ನಮ್ಮ ವಕೀಲರು ವಾದ ಮಂಡಿಸಿದ್ದಾರೆ ಎಂದರು.

ಪಕ್ಷದಲ್ಲಿ ಯಾವುದೇ ರೌಡಿಗಳನ್ನು ನಾವು ಸೇರ್ಪಡೆ ಮಾಡುವುದಿಲ್ಲ. ಯಾವುದೇ ಅವಕಾಶಗಳನ್ನು ಕೊಡುವುದಿಲ್ಲ ಎನ್ನುವುದು ಸ್ಪಷ್ಟವಾಗಿದೆ. ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದರು.