Saval TV on YouTube
ಬೆಂಗಳೂರು(Bengaluru): ಚುನಾವಣೆ ಹತ್ತಿರ ಬರುತ್ತಿದ್ದಂತೆ ಕಾಂಗ್ರೆಸ್’ನ ಟೂಲ್ಕಿಟ್ ಸುದ್ದಿಗಳು ಆರಂಭವಾಗಿವೆ. ಅದರಲ್ಲಿ ಒಂದು ಪ್ರತ್ಯೇಕ ಮುಸ್ಲಿಂ ಕಾಲೇಜು ಸುದ್ದಿ ಎಂದು ಬಿಜೆಪಿ ಆರೋಪಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ‘ಸರ್ಕಾರದಿಂದ ಈ ಬಗ್ಗೆ ಯಾವುದೇ ಪ್ರಸ್ತಾಪವೂ ಇಲ್ಲ, ಕಾಂಗ್ರೆಸ್’ಗೆ ಕೆಲಸವೂ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದೆ.
ವಕ್ಫ್ ಮಂಡಳಿ ಅಧ್ಯಕ್ಷರು ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕವಾಗಿ ಕಾಲೇಜು ತೆರೆಯಲಿದ್ದು, ಹಿಜಾಬ್ ಧರಿಸಲು ಅನುಮತಿ ನೀಡುವುದಾಗಿ ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ಚರ್ಚೆಯಾಗಿಲ್ಲ. ಇದು ಅವರ ವೈಯಕ್ತಿಕ ಅಭಿಪ್ರಾಯವಿರಬಹುದು. ಇದು ನಮ್ಮ ಸರ್ಕಾರದ ನಿಲುವಲ್ಲ. ವಕ್ಫ್ ಮಂಡಳಿ ಅಧ್ಯಕ್ಷರು ಈ ಬಗ್ಗೆ ಸರ್ಕಾರದೊಂದಿಗೆ ಚರ್ಚೆ ಮಾಡಬೇಕು ಎಂದಿದ್ದಾರೆ.