🎯 ರೈಲ್ವೆ ಟೆಕ್ನಿಷಿಯನ್ ನೇಮಕಾತಿ 2024 – 14,928 ಹುದ್ದೆಗಳು 🛠️
ಅರಿಶಿನ ಕುಂಕುಮದ ನೈಜ ಮಹತ್ವ ದೇವರ ದರ್ಶನಕ್ಕೂ, ಆರೋಗ್ಯಕ್ಕೂ 🌼✨
ಪ್ರಧಾನ ಮಂತ್ರಿ ಆವಾಸ್ ಯೋಜನೆಮನೆ ಕಟ್ಟಲು ಪಡೆಯಿರಿ ಸರ್ಕಾರದಿಂದ ಸಬ್ಸಿಡಿ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ಆರೋಗ್ಯ ಸಲಹೆ…..
ಪಾರ್ವತಿ ದೇವಿ ಚಂದ್ರಘಂಟ ಹೇಗಾದರೂ ಗೊತ್ತ
ರಾಮನಗರದಲ್ಲಿ ಅತಿಥಿ ಬೋಧಕರ ಹುದ್ದೆಗಳು
ನವರಾತ್ರಿಯ ಎರಡನೇ ದಿನವಾದ ಇಂದು ತಾಯಿ ಬ್ರಹ್ಮಚಾರಿಣಿಯನ್ನ ಪೂಜಿಸಲಾಗುತ್ತೆ
ನಬಾರ್ಡ್ ಬ್ಯಾಂಕ್ ನಲ್ಲಿ ಆಫೀಸರ್ ಅಸಿಸ್ಟೆಂಟ್ ಹುದ್ದೆಗಳ ಭರ್ತಿ
Important: No API Key Entered.
Many features are not available without adding an API Key. Please go to the YouTube Feed settings page to add an API key after following these instructions.
ಮೈಸೂರು(Mysuru): ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಎರಡು ಆನೆಗಳು ಪ್ರತ್ಯೇಕ ಸ್ಥಳಗಳಲ್ಲಿ ಸಾವನ್ನಪ್ಪಿರುವ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಡಿ.ಬಿ.ಕುಪ್ಪೆ ವನ್ಯಜೀವಿ ವಲಯ ವ್ಯಾಪ್ತಿಯ ಅರಣ್ಯದಲ್ಲಿ ಪ್ರದೇಶದಲ್ಲಿ ನಡೆದಿದೆ.
ಎಚ್.ಡಿ.ಕೋಟೆ ತಾಲ್ಲೂಕಿನ ಡಿ.ಬಿ.ಕುಪ್ಪೆ ಅರಣ್ಯ ವ್ಯಾಪ್ತಿಯಲ್ಲಿ ಮಂಗಳವಾರ ಗಂಡಾನೆಯೊಂದು (25 ವರ್ಷ) ಮೃತಪಟ್ಟಿರುವುದು ಬೆಳಕಿಗೆ ಬಂದಿತ್ತು.
ಆದರೆ ಕಳೆದ ನಾಲ್ಕು ದಿನಗಳ ಹಿಂದೆಯೂ ಸಹ ಒಂದು ಗಂಡಾನೆ (25) ಕಾದಾಟದಿಂದ ಮೃತಪಟ್ಟಿರುವುದು ತಡವಾಗಿ ಬೆಳಕಿಗೆ ಬಂದಿದೆ. ಈ ಎರಡೂ ಆನೆಗಳು ಸಹ ಮತ್ತೊಂದು ಆನೆಯೊಡನೆ ಕಾದಾಟ ನಡೆಸಿಯೇ ಸಾವನ್ನಪ್ಪಿದೆ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ.
ಮಂಗಳವಾರ ಹಾಗೂ ಕಳೆದ ಶುಕ್ರವಾರ ಅರಣ್ಯ ಇಲಾಖೆ ಸಿಬ್ಬಂದಿ ಎಂದಿನಂತೆ ಗಸ್ತು ತಿರುಗುತ್ತಿರುವ ಸಂದರ್ಭದಲ್ಲಿ ಆನೆಗಳು ಸತ್ತಿರುವುದು ಕಂಡುಬಂದಿದೆ. ಘಟನಾ ಸ್ಥಳದ ಹತ್ತಿರ ಹೋಗಿ ನೋಡಿದಾಗ ಮೇಲ್ನೋಟಕ್ಕೆ ಆನೆಯ ದೇಹದ ಮೇಲೆ ಗಾಯದ ಗುರುತುಗಳು ಕಂಡುಬಂದಿವೆ. ಕೂಡಲೇ ಸಿಬ್ಬಂದಿ ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ನಾಗರಹೊಳೆ ಉಪ ಅರಣ್ಯ ಸಂರಕ್ಷಣಾ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಮೇಟಿಕುಪ್ಪೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಂತರ ಪಶುವೈದ್ಯಾಧಿಕಾರಿ ಡಾ.ರಮೇಶ್ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಿದ್ದು, ಬೇರೊಂದು ಆನೆಯೊಂದಿಗಿನ ಕಾದಾಟದಲ್ಲಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ.
ಈ ಸ್ಥಳವು ಹುಲಿ ಸಂರಕ್ಷಿತ ಪ್ರದೇಶವಾಗಿದ್ದು, ಮೃತ ಆನೆಯ ಕಳೇಬರವನ್ನು ವನ್ಯಪ್ರಾಣಿಗಳಿಗೆ ಆಹಾರವಾಗಲೆಂದು ಸ್ಥಳದಲ್ಲಿಯೇ ಬಿಡಲಾಯಿತು ಎಂದು ಅರಣ್ಯ ಇಲಾಖೆ ತಿಳಿಸಿದೆ.