ಮನೆ ರಾಷ್ಟ್ರೀಯ ಸುಣ್ಣದ ಕಲ್ಲಿನ ಗಣಿ ಕುಸಿದು 7 ಮಂದಿ ಸಾವು

ಸುಣ್ಣದ ಕಲ್ಲಿನ ಗಣಿ ಕುಸಿದು 7 ಮಂದಿ ಸಾವು

0

ಜಗದಲ್‌’ಪುರ: ಛತ್ತೀಸಗಡದ ಬಸ್ತಾರ್ ಜಿಲ್ಲೆಯ ಮಾಲೆಗಾಂವ್ ಗ್ರಾಮದಲ್ಲಿ ಸುಣ್ಣದ ಕಲ್ಲಿನ ಗಣಿಯ ಒಂದು ಭಾಗ ಕುಸಿದು ಏಳು ಮಂದಿ ಮೃತಪಟ್ಟಿದ್ದಾರೆ.

ಮೃತರಲ್ಲಿ ಆರು ಮಂದಿ ಮಹಿಳೆಯರು ಸೇರಿದ್ದಾರೆ.

ಜಗದಲ್‌ಪುರದಿಂದ 12 ಕಿ.ಮೀ. ದೂರದಲ್ಲಿ ನಗರ್‌’ನಾರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಗಣಿಯಲ್ಲಿ ಮಣ್ಣು ಅಗೆಯುತ್ತಿದ್ದಾಗ ಒಂದು ಭಾಗ ಕುಸಿದಿದೆ. ಇದರಿಂದ ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡರು ಎಂದು ಪೊಲೀಸ್ ಅಧಿಕಾರಿ ತಿಳಿಸಿದರು.

ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಐವರು ಸ್ಥಳದಲ್ಲೇ ಮೃತಪಟ್ಟರೆ ಇಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.