Saval TV on YouTube
ಮೈಸೂರು(Mysuru): ನಿವೃತ್ತ ಪ್ರಾಧ್ಯಾಪಕಿ ಪ್ರೊ.ಎನ್. ಉಷಾರಾಣಿ ಅವರನ್ನು ಉನ್ನತ ಶಿಕ್ಷಣ ಇಲಾಖೆಯ ರಾಜ್ಯ ಉನ್ನತ ಶಿಕ್ಷಣ ಮಂಡಳಿಯ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ರಾಜ್ಯ ಸರ್ಕಾರವು ಆದೇಶಿಸಿದೆ.
ಉಷಾ ರಾಣಿ ಮೈಸೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಬಹುಮಾಧ್ಯಮ ಸಂಶೋಧನಾ ಸಂಸ್ಥೆ(ಇಎಂಆರ್’ಸಿ)ಯ ನಿರ್ದೇಶಕರಾಗಿ, ಕಲಾ ನಿಕಾಯದ ಡೀನ್, ಯುಜಿಸಿ-ಯುಪಿಇ ಸಂಯೋಜಕರಾಗಿ ಕಾರ್ಯನಿರ್ವಹಿಸಿದ್ದಾರೆ. ಐಸಿಎಸ್’ಎಸ್’ಆರ್ ಹಿರಿಯ ಪ್ರೊಫೆಸರ್ ಫೆಲೊ ಆಗಿಯೂ ಕೆಲಸ ಮಾಡಿದ್ದಾರೆ.
ಮೈಸೂರು ವಿಶ್ವವಿದ್ಯಾಲಯದ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಮೂರು ದಶಕಗಳವರೆಗೆ ಕಾರ್ಯನಿರ್ವಹಿಸಿದ್ದಾರೆ. ಇದನ್ನು ಪರಿಗಣಿಸಿ ಐದು ವರ್ಷಗಳವರೆಗೆ ನಾಮನಿರ್ದೇಶನ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.