ಮನೆ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರೊಫೆಸರ್ ವಶಕ್ಕೆ

ವಿದೇಶಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಪ್ರೊಫೆಸರ್ ವಶಕ್ಕೆ

0

ಹೈದರಾಬಾದ್(Hyderabad): ವಿದೇಶಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ ಆರೋಪದ ಮೇರೆಗೆ ಹೈದರಾಬಾದ್ ವಿಶ್ವವಿದ್ಯಾಲಯದ ಪ್ರೊಫೆಸರ್ ಒಬ್ಬರನ್ನು ವಶೃಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸರು ಶನಿವಾರ ಮಾಹಿತಿ ನೀಡಿದ್ದಾರೆ.

ವಿಶ್ವವಿದ್ಯಾಲಯದ ಸಿಬ್ಬಂದಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಕೇಸ್ ದಾಖಲಿಸಲಾಗಿದ್ದು, 62 ವರ್ಷದ ಪ್ರೊಫೆಸರ್’ನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ.

ಥೈಲ್ಯಾಂಡ್’ನಿಂದ ಬಂದಿರುವ ಸ್ನಾತಕೋತ್ತರ ವಿದ್ಯಾರ್ಥಿನಿಗೆ ಇಂಗ್ಲೀಷ್ ಅಥವಾ ಹಿಂದಿಯಲ್ಲಿ ಮಾತನಾಡಲು ಬಾರದ ಹಿನ್ನೆಲೆಯಲ್ಲಿ ಆಕೆಯ ಹೇಳಿಕೆ ದಾಖಲಿಸಲು ಅನುವಾದಕರ ಸೇವೆಯನ್ನು ಬಯಸಿದ್ದು, ಆಕೆಯ ಹೇಳಿಕೆ ಆಧಾರದ ಮೇಲೆ ಪೊಲೀಸರು ಮುಂದಿನ ತನಿಖೆ ಪ್ರಕ್ರಿಯೆ ನಡೆಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

 ಪ್ರೊಫೆಸರ್ ಶುಕ್ರವಾರ ಸಂಜೆ ತನ್ನ ಮನೆಯಲ್ಲಿ ವಿದೇಶಿ ವಿದ್ಯಾರ್ಥಿನಿಗೆ ಕಿಸ್ ಮಾಡಿ ತಬ್ಬಿಕೊಳ್ಳಲು ಪ್ರಯತ್ನಿಸಿದ ಆರೋಪ ಕೇಳಿಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.