ಮನೆ ಸುದ್ದಿ ಜಾಲ ಡಾ.ಬಿ.ಆರ್. ಅಂಬೇಡ್ಕರ್ ಮಹಾಪರಿನಿರ್ವಾಣದ ದಿನದ ಪ್ರಯುಕ್ತ ಮೈಸೂರು ಜಿಲ್ಲಾಡಳಿತದಿಂದ‌ ಗೌರವ ಸಲ್ಲಿಕೆ

ಡಾ.ಬಿ.ಆರ್. ಅಂಬೇಡ್ಕರ್ ಮಹಾಪರಿನಿರ್ವಾಣದ ದಿನದ ಪ್ರಯುಕ್ತ ಮೈಸೂರು ಜಿಲ್ಲಾಡಳಿತದಿಂದ‌ ಗೌರವ ಸಲ್ಲಿಕೆ

0

ಮೈಸೂರು: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಇಂದು ಪುರಭವನದ ಎದುರು ಇರುವ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆಗೈಯ್ಯುವ ಮೂಲಕ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ಮಹಾಪರಿನಿರ್ವಾಣದ ದಿನದ ಪ್ರಯುಕ್ತ ಗೌರವ ನಮನ ಸಲ್ಲಿಸಲಾಯಿತು.


ಮಹಾನಗರ ಪಾಲಿಕೆಯ ಮೇಯರ್ ಶಿವಕುಮಾರ್ ಅವರು ಪುಷ್ಪಾರ್ಚನೆಗೈದು ಗೌರವ ಸಮರ್ಪಿಸಿದರು.  ಬಳಿಕ ಮಾತನಾಡಿದ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರು ಮಹಿಳೆಯರ ಹಕ್ಕುಗಳು ಹಾಗೂ ಸಮಾನತೆಗಾಗಿ ಮತ್ತು ಶೋಷಿತ ವರ್ಗಗಳ ಹಕ್ಕಿಗಾಗಿ ಹೋರಾಡಿದ ಸಮಾಜ ಸುಧಾರಕರು. ಅವರು ತೋರಿಸಿದ ಸಮಾನತೆಯ ಹಾದಿಯಲ್ಲಿ ನಡೆಯುವುದೇ ನಾವು ಅವರಿಗೆ ಸಲ್ಲಿಸುವ ದೊಡ್ಡ ಗೌರವ ಎಂದು ತಿಳಿಸಿದರು.

ಈ ಸಂದರ್ಭ ಶಾಸಕ ಎಸ್.ಎ.ರಾಮದಾಸ್,  ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷ ಕೋಟೆ ಶಿವಣ್ಣ, ಉಪಮೇಯರ್ ಡಾ.ಜಿ.ರೂಪಾ ಯೋಗೀಶ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಬಿ.ಆರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.